ಜೈಪುರ: ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾಂಗ್ರೆಸ್ ಪಕ್ಷವು ಎರಡನೇ ಭಾರಿಗೆ ಕರಣ್‌ಪುರ ವಿಧಾನಸಭಾ ಕ್ಷೇತ್ರದಿಂದ ಕೂನರ್ ಅವರನ್ನು ಕಣಕ್ಕಿಳಿಸಿತ್ತು.
75 ವರ್ಷದ ಕೂನರ್ ಅವರು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕುಟುಂಬಸ್ಥರು ಮೃತ ದೇಹವನ್ನು ರಾಜಸ್ಥಾನದ ಶ್ರೀ ಗಂಗಾನಗರಕ್ಕೆ ತೆಗೆದುಕೊಂಡು ಹೋಗಿ, ಅಂತಿಮ ಸಂಸ್ಕಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹಿರಿಯ ಕಾಂಗ್ರೆಸ್ ನಾಯಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.