ಅಹಮದಾಬಾದ್: ರಾಜ್ಯದ ಜನತೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆ ಇಟ್ಟಿರುವುದರಿಂದ ಗುಜರಾತ್‌ನಲ್ಲಿ ನಾವು ಹೊಸ ದಾಖಲೆಯನ್ನು ರಚಿಸುತ್ತಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಗುಜರಾತ್‌ನಲ್ಲಿ 182 ವಿಧಾನಸಭಾ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ.64.33ರಷ್ಟು ಮತದಾನವಾಗಿದೆ. ಆದರೆ, ಇದು 2017ರ ಚುನಾವಣೆಯಲ್ಲಿ ದಾಖಲಾದ ಮತದಾನಕ್ಕೆ ಹೋಲಿಸಿದರೆ ಶೇ.4ಕ್ಕಿಂತ ಕಡಿಮೆಯಾಗಿದೆ.1,621 ಅಭ್ಯರ್ಥಿಗಳು ಕಣದಲ್ಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಭಾರೀ ಭದ್ರತೆ ಮಾಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದಿದ್ದ ಬಿಜೆಪಿ ಈ ಭಾರಿಯೂ ಗೆಲ್ಲುವ ವಿಶ್ವಾಸದಲ್ಲಿ ಇದೆ. ಚುನಾವಣಾ ಎಕ್ಸಿಟ್ ಪೋಲ್‌ಗಳು ಕೂಡ ಬಿಜೆಪಿಗೆ ಪೂರಕವಾಗಿ ಇದ್ದವು.
ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಫರ್ಧೆವನ್ನು ನೀಡಿತು. ಆದಾಗ್ಯೂ, ಆಮ್ ಆದ್ಮಿ ಪಾರ್ಟಿ ಮತ ಪಡೆಯುವ ಮೂಲಕ ಕಾಂಗ್ರೆಸ್‌ಗೆ ಪ್ರಬಲ ಹೊಡೆತ ನೀಡಬಹುದು. 2017 ರಲ್ಲಿ ಪಾಟಿದಾರ್ ಸಮುದಾಯದ ಪ್ರತಿಭಟನೆಯೊಂದಿಗೆ ಬಿಜೆಪಿ ಕೂಡ ಒತ್ತಡದಲ್ಲಿ ಸಿಲುಕಿತ್ತು. ಆದರೆ ಈ ಬಾರಿ ಪರಿಸ್ಥಿತಿಯು ಬಿಜೆಪಿಯ ಪರವಾಗಿದ್ದು, ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಬಹುದು ಎನ್ನಲಾಗಿದೆ.
ಗುಜರಾತ್ 156 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಡಿಸೆಂಬರ್ 1 ಹಾಗೂ 5ರಂದು ಕ್ರಮವಾಗಿ ಮೊದಲ ಹಾಗೂ ಎರಡನೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 59.11 ಹಾಗೂ ಎರಡನೇ ಹಂತದಲ್ಲಿ 63.14ರಷ್ಟು ಮತದಾನವಾಗಿತ್ತು.