ಬೆಂಗಳೂರು: ಕೃಷ್ಣನಗರಿ, ದೇವನಗರಿ ಉಡುಪಿಯ ಕೃಷ್ಣಮಠಕ್ಕೆ ಮುಸ್ಲಿಂ ಅರಸರು ಜಾಗವನ್ನು ದಾನವಾಗಿ ನೀಡಿದ್ದರು ಎನ್ನುವ ಕೆಪಿಸಿಸಿ ಮುಖ್ಯ ಕಾರ್ಯದರ್ಶಿ ಮಿಥುನ್ ರೈ ಹೇಳಿಕೆ ನೀಡಿದ್ದರು ಈ ಹೇಳಿಕೆಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಿಡಿಮಿಡಿಗೊಂಡಿದ್ದಾರೆ. ಮಿಥುನ್ ರೈ ಹೇಳಿಕೆಗೆ ಟ್ವಿಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ದೇವನಗರಿ ಉಡುಪಿಯ ಇತಿಹಾಸ ಸಾವಿರಾರು ವರ್ಷಗಳ ಹಿಂದಿನದು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ನಿಮಗೆ ಏನೂ ಗೊತ್ತಿಲ್ಲ ಎಂದ ಮೇಲೆ ಸಾರ್ವಜನಿಕ ವೇದಿಕೆಯಲ್ಲಿ ಮೂರ್ಖತನದ ಮಾತನಾಡುವುದೇಕೆ? ಎಂದು ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದಾರೆ.
ಮೂಡಬಿದಿರೆ ತಾಲೂಕಿನ ಪುತ್ತಿಗೆಯಲ್ಲಿ ನೂರಾನಿ ಮಸೀದಿಯಿಂದ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಎನ್ನುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಿಥುನ್ ರೈ ಮಾತಿಗೆ ಕರಾವಳಿ ಭಾಗದಲ್ಲಿ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.