ನವದೆಹಲಿ:‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಸಾಧಕಬಾಧಕಗಳನ್ನು ಪರಿಶೀಲಿಸಲು ಭಾರತ ಸರ್ಕಾರವು 8 ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಅಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಜಿ ರಾಜ್ಯಸಭಾ ಲೋಪಿ ಗುಲಾಂ ನಬಿ ಆಜಾದ್ ಮತ್ತು ಇತರರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿದೆ.
ಸೆ.18 ರಿಂದ ಸೆ.22ರವರೆಗೆ ವಿಶೇಷ ಸಂಸತ್ ಅಧಿವೇಶನ ನಡೆಯಲಿದ್ದು, ಹಲವು ಮಸೂದೆಯನ್ನು ಮಂಡಿಸಲು ಬಾಕಿ ಇರುವ ಕಾರಣ ಈ ವಿಶೇಷ ಅಧಿವೇಶವನ್ನು ಕರೆಯಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ : ಈ ಕಾಂಗ್ರೆಸ್‌ನವರು ರೈತರ ‘ಸಮಾಧಿ’ ಮಾಡ್ತಿದ್ದಾರೆ : ಜಿ ಟಿ ದೇವೇಗೌಡ ಕಿಡಿ
ಇನ್ನು ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ – ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ‘ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.