ರಾಮನಗರ: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣವಾಗುವುದು ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ರಾಮದೇವರ ಬೆಟ್ಟ ಐತಿಹಾಸಿಕವಾಗಿದ್ದು, ಅಲ್ಲಿ ನೂತನ ರಾಮಮಂದಿರ ನಿರ್ಮಾಣವಾಗಬೇಕೆಂಬುದು ಹಲವರ ಆಶಯವಾಗಿತ್ತು. ನನ್ನ ಪ್ರಕಾರ ಯಾರೂ ಇದಕ್ಕೆ ವಿರೋಧ ಮಾಡುವುದಿಲ್ಲ. ವಿರೋಧ ಮಾಡುವವರು ವಿರೋಧಿಸಲಿ. ನನ್ನ ತಕರಾರಿಲ್ಲ ಎಂದು ಹೇಳಿದರು.
ಬಿಜೆಪಿ, ಕಾಂಗ್ರೆಸ್ ಆಗಿ ಜೆಡಿಎಸ್ ಎಂದು ರಾಮ ಮಂದಿರ ನಿರ್ಮಾಣ ಮಾಡುತ್ತಿಲ್ಲ. ಐತಿಹಾಸಿಕ ರಾಮನ ಬೆಟ್ಟವಿದೆ ಹೀಗಾಗಿ ರಾಮ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಮಂದಿರ ನಿರ್ಮಾಣಕ್ಕೆ ಒತ್ತಾಯಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಈ ದೇವಾಲಯವು ಅಯೋಧ್ಯೆಯಲ್ಲಿರುವ ದೇವಾಲಯವನ್ನು ಹೋಲುತ್ತದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಬಜೆಟ್ ಘೋಷಣೆಯನ್ನು ಪ್ರಶ್ನಿಸಿದ್ದರೂ ಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿಲ್ಲ.ಆದರೆ ಬಿಜೆಪಿಯ ಘೋಷಣೆಗೆ ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್, ಮೊದಲು ರಾಮನಗರದಲ್ಲಿ ಬಿಜೆಪಿ ಕಚೇರಿ ಕಟ್ಟಲಿ ಎಂದು ವ್ಯಂಗ್ಯವಾಡಿದ್ದಾರೆ.
ರಾಮನಗರದಲ್ಲಿ ಬಿಜೆಪಿಗೆ ರಾಮಮಂದಿರ ನಿರ್ಮಿಸಲು ಸಾಧ್ಯವಿಲ್ಲ, ಅದು ಬಜೆಟ್ ಪುಸ್ತಕದಲ್ಲಿಯೇ ಉಳಿಯಲಿದೆ, ಇದು ನನ್ನಿಂದ ಮಾತ್ರ ಸಾಧ್ಯ. ಈ ಪ್ರದೇಶದ ರಾಜಕೀಯ ಚಿತ್ರಣವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.