Wednesday, May 31, 2023
spot_img
- Advertisement -spot_img

ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ : ರಮಾನಾಥ ​ರೈ

ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಸೋತರೂ ಪಕ್ಷದ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ‌ ಇರುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ್ ​ರೈ ಹೇಳಿದರು.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ರಾಜ್ಯದ ಜನ ಮತ ಕೊಟ್ಟಿದ್ದಾರೆ. ನನ್ನ ಸೋಲಿನ ಅವಲೋಕನ ಮಾಡಿದ್ದೇನೆ. ಮುಂದೆ ಹೈಕಮಾಂಡ್​​ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದರು.

ಬಿಜೆಪಿ ಸ್ಪಷ್ಟ ಬಹುಮತದಿಂದ ಯಾವತ್ತೂ ಸರ್ಕಾರ ರಚಿಸಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುತ್ತೆ. ಮುಖ್ಯಮಂತ್ರಿ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದ್ದು, ಸಿಎಂ ಪ್ರಮಾಣ ವಚನದ ಬಳಿಕ ಗ್ಯಾರಂಟಿ ಅನುಷ್ಠಾನ ಆಗಲಿದೆ ಎಂದು ಹೇಳಿದರು.

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ ರಮಾನಾಥ್ ರೈ ಸಹ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಇದುವರೆಗೆ ಸತತ ಒಂಬತ್ತನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು 1985 ರಿಂದ ಇದುವರೆಗೂ ಅವರು ಆರು ಬಾರಿ ಗೆದ್ದಿದ್ದಾರೆ ಮತ್ತು ಈ ಸಲ ಸೇರಿಸಿ ಮೂರು ಬಾರಿ ಸೋತಿದ್ದಾರೆ.

Related Articles

- Advertisement -

Latest Articles