ಬೆಳಗಾವಿ : ಮಹೇಶ ಕುಮಠಳ್ಳಿಗೆ ಟಿಕೆಟ್ ಸಿಗುವ ಬಗ್ಗೆ ನಮಗೆ ನೂರಕ್ಕೆ ನೂರು ವಿಶ್ವಾಸವಿದೆ ಎಂದು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಮಾಧ್ಯಮಗಳೊಂದಿಗೆ ಮಾತನಾಡಿ, ಮೊದಲಿನಿಂದಲೂ ಕುಮಟಹಳ್ಳಿಗೆ ಟಿಕೆಟ್ ಸಿಗಬೇಕು ಅನ್ನೋದು ನನ್ನ ಆಸೆ, ಇದರ ಜೊತೆಗೆ ಶ್ರೀಮಂತ ಪಾಟೀಲ ಮತ್ತು ನಾನೂ ಸೇರಿ ಬಿಜೆಪಿಗೆ ಬಂದಿರುವ 17 ಜನರಿಗೂ ಹೈಕಮಾಂಡ್ ಆಶೀರ್ವಾದ ಮಾಡುವ ವಿಶ್ವಾಸವಿದೆ” ಎಂದರು.
ಬಿಜೆಪಿ ಯಾವ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ ಎಂದು ಕೇಳಿದಾಗ, “ಟಿಕೆಟ್ ಯಾವಾಗ ಅನೌನ್ಸ್ ಆಗುತ್ತೋ ಗೊತ್ತಿಲ್ಲ. ಆದರೆ ಏ.10 ಅಥವಾ 11ರಂದು ಆಗಬಹುದು” ಎಂದು ಹೇಳಿದರು .
ಇನ್ನೂ ಹಾಲಿ ಶಾಸಕ ಮಹೇಶ ಕುಮಠಳ್ಳಿಗೆ ಬಿಜೆಪಿ ಟಿಕೆಟ್ ಕೊಡಬೇಕು. ಒಂದು ವೇಳೆ ಅಥಣಿ ಕ್ಷೇತ್ರದಲ್ಲಿ ಕುಮಠಳ್ಳಿ ಅವರಿಗೆ ಟಿಕೆಟ್ ಕೊಡದಿದ್ದರೆ ನಾನು ಗೋಕಾಕದಿಂದ ಸ್ಪರ್ಧಿಸುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಅಂದಹಾಗೆ ಹಾಲಿ ಬಿಜೆಪಿ ಶಾಸಕ ಮಹೇಶ್ ಕುಮಠಳ್ಳಿ ಹಾಗೂ ವಿಧಾನ ಪರಿಷತ್ ಸದಸ್ಯ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಡುವೆ ಬಿಜೆಪಿ ಟೆಕೆಟ್‌ಗೆ ಸ್ಪರ್ಧೆ ಏರ್ಪಟ್ಟಿದೆ.