ಚಾಮರಾಜನಗರ : ಬಿಜೆಪಿ ರಾಜ್ಯದಲ್ಲಿ ಆರಂಭಿಸಿರೋದು ವಿಜಯ ಸಂಕಲ್ಪ ಯಾತ್ರೆಯಲ್ಲ, ಕ್ಷಮಾಪಣಾ ಯಾತ್ರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಉದ್ಯೋಗ ನೇಮಕಾತಿಯಲ್ಲಿ ಹಗರಣ ಮಾಡಿ 40% ಕಮಿಷನ್ ಪಡೆದು ಈಗ ಹತಾಶೆ ಮನೋಭಾವದಿಂದ ಯಾತ್ರೆ ಆರಂಭಿಸಿದ್ದಾರೆ ಎಂದರು. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಬ್ರಾಂಡ್ ಕರ್ನಾಟಕ ಎಂಬುದನ್ನೇ ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದರು.
ಜೊತೆಗೆ ಕಾಂಗ್ರೆಸ್ ನ ಭರವಸೆಗಳು ಜನರ ಮನ ಮುಟ್ಟುತ್ತಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಜೆ.ಪಿ. ನಡ್ಡಾ ವಿಜಯ ಸಂಕಲ್ಪ ಯಾತ್ರೆಗೆ ನಗಾರಿ ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಈ ರಥಯಾತ್ರೆಯನ್ನು ದಿಗ್ವಿಜಯದ ಯಾತ್ರೆ ಎಂದು ಬಣ್ಣಿಸಿದ್ದರು.
ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ಮುಖಂಡು ಮಲೆ ಮಹದೇಶ್ವರ ಬೆಟ್ಟದಲ್ಲಿ ‘ಮಾದಪ್ಪ’ನ ದರ್ಶನ ಪಡೆದರು. ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ.