ಬೆಂಗಳೂರು : ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಹೆಚ್.ಡಿ ಕೋಟೆ ತಾಲೂಕಿನ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದುರವರ ತಂಗಿ ರಂಜಿತಾ ಎಸ್. ಚಿಕ್ಕಮಾದು ಇಂದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಹುಣಸೂರು ಶಾಸಕ ಹೆಚ್.ಪಿ ಮಂಜುನಾಥ್ ಅವರೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಂಜಿತಾ ಇದೀಗ ಜಿ.ಟಿ.ದೇವೇಗೌಡ ಅವರ ಪುತ್ರ ಜಿ.ಡಿ ಹರೀಶ್‌ಗೌಡ ಅವರೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ.
ರಂಜಿತಾ ಮಾಜಿ ಶಾಸಕ ದಿವಂಗತ ಚಿಕ್ಕಮಾದು ಅವರ ಪುತ್ರಿ. ಚಿಕ್ಕಮಾದು ಈ ಹಿಂದೆ ಜೆಡಿಎಸ್‌ನಲ್ಲಿದ್ದರು. ನಂತರ ಪುತ್ರ ಅನಿಲ್ ಚಿಕ್ಕಮಾದು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾದರು. ಆದರೀಗ ಅಣ್ಣ ಕಾಂಗ್ರೆಸ್‌ನಲ್ಲಿದ್ದರೆ ತಂಗಿ ರಂಜಿತಾ ಅಭಿಮುಖವಾಗಿ ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕೆ, ಎಂಎಲ್ ಎ ಜಿ.ಟಿ.ದೇವೇಗೌಡ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದು, ನಮ್ಮ ತಂದೆಯವರ ಬೆಂಬಲಿಗರ ಆಸೆಯಂತೆ ಯಾವುದೇ ಷರತ್ತುಗಳಿಲ್ಲದೇ ಪಕ್ಷ ಸೇರ್ಪಡೆಯಾಗ್ತಿದ್ದೇನೆ ಎಂದು ರಂಜಿತಾ ಹೇಳಿದರು.