ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗಿದ್ದ ಪ್ರಸನ್ನ ಗೌಡ ಶಾಕ್ ಕೊಟ್ಟಿದ್ದಾರೆ.
ಕುಮಾರಸ್ವಾಮಿ ನಾಯಕತ್ವ ಮೆಚ್ಚಿ ಜೆಡಿಎಸ್ ಸೇರುತ್ತಿದ್ದೇನೆ,ನಾನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಬೇಕಿತ್ತು. ಆದರೆ ಕಾಂಗ್ರೆಸ್ ನಾಯಕತ್ವದಿಂದ ಬೇಸತ್ತಿದ್ದೇನೆ. ಆ ಪಕ್ಷದಲ್ಲಿ ಸ್ಪಷ್ಟ ನಿಲುವು ಇಲ್ಲ. ಸುಳ್ಳು ಘೋಷಣೆಗಳನ್ನು ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ ಹೀಗಾಗಿ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿಯೂ ಆಗಿರುವ ಕುಮಾರಸ್ವಾಮಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡುವುದಾಗಿ ಪ್ರಸನ್ನ ಹೇಳಿದ್ದಾರೆ. ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು.
ಚನ್ನಪಟ್ಟಣ ಟಿಕೆಟ್ ಸಿಗುವುದು ಅನುಮಾನ ಎನ್ನುವ ಸುಳಿವು ಸಿಗುತ್ತಿದ್ದಂತೆಯೇ ಪ್ರಸನ್ನಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ನತ್ತ ಮುಖ ಮಾಡಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ಗೆ ಬಿಗ್ ಶಾಕ್ ಆಗಿದೆ.
ಅಲ್ಲದೇ ನಟಿ ರಮ್ಯಾ ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಟಿಕೆಟ್ ಸಿಗದಿರುವುದು ಸುಳಿವು ಸಿಗುತ್ತಿದ್ದಂತೆಯೇ ಚನ್ನಪಟ್ಟಣ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನ ಗೌಡ ಜೆಡಿಎಸ್ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ.