Monday, March 27, 2023
spot_img
- Advertisement -spot_img

ಪೊಲೀಸ್ ಗೌರವದೊಂದಿಗೆ ಆರ್‌.ಧ್ರುವನಾರಾಯಣ ಅಂತ್ಯಕ್ರಿಯೆ ನಡೆಸಲಾಗುವುದು: ಸಿಎಂ ಬೊಮ್ಮಾಯಿ

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರ ಹುಟ್ಟೂರಿನಲ್ಲಿ ನಡೆಯಲಿದ್ದು, ಪೊಲೀಸ್ ಗೌರವದೊಂದಿಗೆ ಆರ್‌.ಧ್ರುವನಾರಾಯಣ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆರ್ ಧ್ರುವ ನಾರಾಯಣ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಂಸದರಾದ ಶ್ರೀ ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅಪಾರ ದುಃಖವಾಯಿತು. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರೂ, ಶತ್ರುವೂ ಅಲ್ಲ. ಸಂಸದರಾಗಿ, ಶಾಸಕರಾಗಿ ಜನರೊಂದಿಗೆ ಇದ್ರು. ತುಂಬಾ ಸರಳ ಸಜ್ಜನಿಕೆಯ ನೇತಾರ. ಅವರ ಅಗಲಿಕೆಗೆ ಬಿಜೆಪಿ ರಾಜ್ಯ ಘಟಕ ಸಂತಾಪ ಸೂಚಿಸುತ್ತದೆ ಎಂದು ಮಾಜಿ ಸಿಎಂ ಸದಾನಂದಗೌಡ ಸಂತಾಪ ಸೂಚಿಸಿದ್ದಾರೆ.

ಶೋಷಿತರು, ದಮನಿತರು, ದಲಿತ ಮತ್ತು ಹಿಂದುಳಿದ ವರ್ಗಗಳ ಧ್ವನಿಯಾಗಿದ್ದ ಆರ್. ಧ್ರುವನಾರಾಯಣ್ ನಿಧನದಿಂದ ಕರ್ನಾಟಕ ರಾಜ್ಯದ ಒಬ್ಬ ಅತ್ಯುತ್ತಮ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ನಿಧನದಿಂದ ಆಗಿರುವ ದುಃಖವನ್ನು ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ದಯಪಾಲಿಸಲಿ, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಎಂ.ಬಿ.ಪಾಟೀಲ್‌, “ನನ್ನ ಆತ್ಮೀಯರಾಗಿದ್ದ ನಮ್ಮ ಪಕ್ಷದ ಕಾರ್ಯಧ್ಯಕ್ಷರು, ಸರಳ ಸಜ್ಜನಿಕೆಯ ಸ್ನೇಹಜೀವಿ ರಾಜಕಾರಣಿ ಎಂದೇ ಖ್ಯಾತರಾದ ಆರ್. ಧ್ರುವನಾರಾಯಣ್ ಅವರ ನಿಧನದ ಸುದ್ದಿ ಆಘಾತ ತರಿಸಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ನಿಧನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ, ಅಭಿಮಾನಿಗಳಿಗೆ ಹಾಗೂ ಅವರನ್ನು ಪ್ರೀತಿಸುತ್ತಿದ್ದ ಲಕ್ಷಾಂತರ ಮತದಾರರಿಗೆ ತುಂಬಲಾಗದ ನಷ್ಟವಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

Related Articles

- Advertisement -

Latest Articles