ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಘೋಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ‘ಬಾಂಬ್’ ಸಿಡಿಸಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ತೊರೆದು ಹೊಸ ಪಕ್ಷ ಸ್ಥಾಪಿಸುವಂತಹ ವಾತಾವರಣ ಸೃಷ್ಟಿಸಿದ ಬಗ್ಗೆ ಸಮಯ ಬಂದಾಗ ಆ ಪಕ್ಷದವರ ದಾಖಲೆ ಬಿಡುಗಡೆ ಮಾಡುವೆ’ ಎಂದು ಕಿಡಿಕಾರಿದ್ದಾರೆ.
‘ಯಡಿಯೂರಪ್ಪ ಮಾತ್ರ ಆತ್ಮೀಯತೆಯಿಂದ ನಡೆಸಿಕೊಂಡಿದ್ದು ಹೆಚ್ಚು ಕೃತಜ್ಞತಾ ಭಾವ ಹೊಂದಿದ್ದಾರೆ ಎಂದರು.2018 ರ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ಬಾ’ ಎಂದು ಕರೆಸಿಕೊಂಡರು. ಆಗ ದೆಹಲಿಗೆ ತೆರಳಿದಾಗ, ‘ಶ್ರೀರಾಮುಲು ಪರ ಚುನಾವಣಾ ಪ್ರಚಾರ ಮಾಡಿ. ಮುಂದಿನ ದಿನಗಳಲ್ಲಿ ಉತ್ತಮ ಸ್ಥಾನ ನೀಡುತ್ತೇವೆ’ ಎಂದು ಭರವಸೆ ನೀಡಿ ಬಳಿಕ ಶಾ ಕೈಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರು ನನ್ನನ್ನು ಸಚಿವನನ್ನಾಗಿ ಮಾಡುತ್ತೇನೆ ಎಂದು ಹೇಳಿದರು. ಆದರೆ ನಾನು ಸಚಿವ ಸ್ಥಾನ ತಿರಸ್ಕರಿಸಿ ಹಿಂದುಳಿದ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಶ್ರೀರಾಮುಲು ಅವರಿಗೆ ಅವಕಾಶ ಕಲ್ಪಿಸಿಕೊಟ್ಟೆಎಂದು ರೆಡ್ಡಿ ನೆನಪಿಸಿಕೊಂಡರು.
ವ್ಯಾಪಾರ-ವ್ಯವಹಾರ ಬದಿಗೊತ್ತಿ ಬಳ್ಳಾರಿಯಲ್ಲಿ ನೆಲೆಯೇ ಇಲ್ಲದ ಬಿಜೆಪಿಗೆ ನೆಲೆ ಕಲ್ಪಿಸಿದ್ದಕ್ಕೆ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.