ನವದೆಹಲಿ: ಬಿಜೆಪಿಯನ್ನು 2024ರಲ್ಲಿ ಅಧಿಕಾರದಿಂದ ಹೊರಗಿಡುವುದೇ ಗಾಂಧೀಜಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಹೇಳಿದ್ದಾರೆ. ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ಅಡಿಪಾಯ ಹಾಕಿದೆ. ಹಾಗಾಗಿ ಅದರ ರಕ್ಷಣೆಯ ಹೊಣೆಯೂ ಕಾಂಗ್ರೆಸ್ ಮೇಲಿದೆ ಎಂದಿದ್ದಾರೆ.
2024ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಶತಮಾನೋತ್ಸವವನ್ನು ಆಚರಿಸುತ್ತಾರೆ. ಈ ವೇಳೆ ಅಧಿಕಾರದಿಂದ ಬಿಜೆಪಿಯನ್ನು ದೂರ ಇಡುವುದು ಮಹಾತ್ಮ ಗಾಂಧಿ ಅವರಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ‘ಭಾರತದೊಂದಿಗೆ ಯುದ್ಧಕ್ಕೆ ಬಂದ್ರೆ ನಿಮ್ಮ ಮಕ್ಕಳನ್ನು ಬೇರೆಯವರು ಸಾಕಬೇಕಾಗುತ್ತೆ’
ಭಾರತ ಪ್ರಸ್ತುತ ಆಡಳಿತ ಬದಲಾವಣೆ ಎದುರು ನೋಡುತ್ತಿದೆ. ಇದಕ್ಕಾಗಿ ಪಕ್ಷವು ಹಗಲಿರುಳು ಕೆಲಸ ಮಾಡಬೇಕಾಗಿದೆ. ಈ ಸರ್ವಾಧಿಕಾರಿ ಸರ್ಕಾರವನ್ನು ತೊಡೆದುಹಾಕುವ ಮೂಲಕ ಭಾರತದ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ದೇಶದ ಜನರು ಸಹ ಬಿಜೆಪಿಯನ್ನು ವಿರೋಧಿಸಿದ್ದಾರೆ. ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಿಕ್ಕಿರುವುದು ಇದಕ್ಕೆ ಸಾಕ್ಷಿ ಎಂದರು.
ಇದನ್ನೂ ಓದಿ: 168 ಇಲಿ ಹಿಡಿಯಲು 69 ಲಕ್ಷ ರೂ. ಖರ್ಚು ಮಾಡಿದ ರೈಲ್ವೆ: ಇಡಿ, ಸಿಬಿಐ ಎಲ್ಲಿದೆ? ಎಂದ ಎಎಪಿ ಸಂಸದ
ಕಾಂಗ್ರೆಸ್‌ಗೆ ದೇಶದಲ್ಲಿ ಉತ್ತಮ ವಾತಾವರಣವಿದೆ. ರಾಹುಲ್, ಪ್ರಿಯಾಂಕಾ ಪಕ್ಷದ ಎಲ್ಲಾ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ. ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲಾಗ್ತಿದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.