Saturday, June 10, 2023
spot_img
- Advertisement -spot_img

#BREAKING ರಾಜಕೀಯ ನಿವೃತ್ತಿ ಘೋಷಿಸಿದ ರೇಣುಕಾಚಾರ್ಯ

ದಾವಣಗೆರೆ: ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿದರೂ, ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ದುಡಿದರೂ ಜನರು ಸೋಲಿಸಿದರು ಎಂದು ರೇಣುಕಾಚಾರ್ಯ ಭಾವುಕರಾದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಘೋಷಿಸಿ, ಮಾಧ್ಯಮಗಳ ಜೊತೆ ಮಾತನಾಡಿದರು. ಅಭಿವೃದ್ಧಿ ಕೆಲಸ, ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದರೂ ಜನರು ಸೋಲಿಸಿದರು, ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜಕೀಯ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದರು. ನಾನು ಕ್ಷೇತ್ರದ ಜನರಿಗಾಗಿ ಹಗಲಿರುಳು ಕೆಲಸ ಮಾಡಿದೆ. ಆದರೂ ರೀತಿ ಸೋಲು ಆಯ್ತಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ರೇಣುಕಾಚಾರ್ಯ ನಿನ್ನೆ ನಡೆದ ಮತದಾನದ ವೇಳೆ ಒಂದೇ ಒಂದು ಸುತ್ತಿನಲ್ಲಿಯೂ ಮುನ್ನಡೆ ಸಾಧಿಸಿರಲಿಲ್ಲ. ಹೀಗಾಗಿಯೇ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ರೇಣುಕಾಚಾರ್ಯ ಬೆಂಬಲಿಗರು, ರಾಜಕೀಯ ನಿವೃತ್ತಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಅಷ್ಟೇ ಅಲ್ಲದೇ ರೇಣುಕಾಚಾರ್ಯ ನಿವೃತ್ತಿ ಹಿಂಪಡೆಯಲು ಒತ್ತಾಯಿಸಿ ಒಬ್ಬ ಬೆಂಬಲಿಗ ವಿಷ ಸೇವಿಸಲು ಯತ್ನಿಸಿದ್ದು, ಕಾರ್ಯಕರ್ತರು ತಡೆದಿದ್ದಾರೆ.

Related Articles

- Advertisement -spot_img

Latest Articles