ಚೆನ್ನೈ: ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ಸಂಬಂಧ ರೈತರು ಸೇರಿ ಬಿಜೆಪಿ ಪ್ರತಿಭಟನೆ ನಡೆಸಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ಪಟ್ಟುಹಿಡಿಯಲಾಗಿದೆ. ಆದರೆ ಮತ್ತೊಂದೆಡೆ ಕರ್ನಾಟಕಕ್ಕೆ ನೀರುಬಿಡಲು ನಿರ್ದೇಶನ ನೀಡಬೇಕು ಎಂದು ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
2018ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಕಾವೇರಿ ನದಿಯಿಂದ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
ಇದನ್ನೂ ಓದಿ: ಹೈದರಾಬಾದ್ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ
ಜಲಸಂಪನ್ಮೂಲ ಸಚಿವ ದುರೈ ಮುರುಗನ್ ನೇತೃತ್ವದ ರಾಜ್ಯದ ಸಂಸದರ ಸರ್ವಪಕ್ಷ ನಿಯೋಗ ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಫೆಬ್ರವರಿ 2, 2018 ರಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ರೂಪಿಸಿದ ಕಾವೇರಿ ನೀರಿನ ಅನುಪಾತ ಹಂಚಿಕೆ ವಿಧಾನವನ್ನು ಕರ್ನಾಟಕ ಅನುಸರಿಸುತ್ತಿಲ್ಲ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪತ್ರದಲ್ಲಿ ಆರೋಪಿಸಿದ್ದಾರೆ. ತಮಿಳುನಾಡಿಗೆ ಸೆಪ್ಟೆಂಬರ್ 14ರ ವರೆಗೆ ಕರ್ನಾಟಕದಿಂದ 103.5 ಟಿಎಂಸಿ ಅಡಿ ನೀರು ಬರಬೇಕಿತ್ತು. ಆದರೆ ರಾಜ್ಯಕ್ಕೆ ಕೇವಲ 38.4 ಟಿಎಂಸಿ ಅಡಿ ನೀರು ಸಿಕ್ಕಿದ್ದು, 65.1 ಟಿಎಂಸಿ ಅಡಿ ನೀರು ಕಡಿಮೆಯಾಗಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
ಇದನ್ನೂ ಓದಿ: ‘ಬಿಜೆಪಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡ್ತಿದೆ’
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಆಯೋಗ ಸಕಾಲದಲ್ಲಿ ನೀರು ಬಿಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ ಎಂದು ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.