ಲಕ್ನೋ: ಮಹಿಳಾ ಮೀಸಲಾತಿ ಮಸೂದೆಯು ಮಹಿಳಾ ಸಬಲೀಕರಣದತ್ತ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಬಣ್ಣಿಸಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸರ್ಕಾರ ಮಂಗಳವಾರ ಮಂಡಿಸಿದೆ. ನೂತನ ಸಂಸತ್ ಭವನದಲ್ಲಿ ಮಂಡಿಸಲಾದ ಮೊದಲ ಮಸೂದೆ ಇದಾಗಿದೆ. ಈ ಮಸೂದೆಗೆ ನಾರಿಶಕ್ತಿ ವಂದನ್ ಎಂದು ಕರೆಯಲಾಗಿದೆ.
ಇದನ್ನೂ ಓದಿ: ಹೊಸ ಸಂಸತ್ ಮುಂದೆ ಸಂಸದ ತೇಜಸ್ವಿ ಸೂರ್ಯ ಪೋಸ್!
ಈ ಮೀಸಲಾತಿ ಮಸೂದೆ ಕುರಿತಂತೆ ಟ್ವೀಟ್ (ಎಕ್ಸ್) ಮಾಡಿರುವ ಅವರು, ಮಸೂದೆಯ ಪರಿಚಯವು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ, ಇದು ಶ್ರೇಷ್ಠ ಪ್ರಜಾಪ್ರಭುತ್ವವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದ ‘ನಾರಿಶಕ್ತಿ ವಂದನ್ ಅಧಿನಿಯಮ್’ ಮಹಿಳಾ ಸಬಲೀಕರಣದತ್ತ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಇದು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ‘ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಬದ್ಧತೆ ಮೆರೆದಿತ್ತು’
27 ವರ್ಷದಿಂದಲೂ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಮಂಡನೆಯಾದರೂ ಅಂಗೀಕಾರವಾಗದೆ ಉಳಿದಿದ್ದ ಮಸೂದೆಯು ಇಂದು ಮತ್ತೆ ಮಂಡನೆಯಾಗಿದೆ. ಅಧಿವೇಶನ ನಾಳೆಗೆ ಮುಂದೂಡಿಕೆಯಾಗಿದ್ದು, ನಾಳೆ ಮತ್ತೆ ಸದನದಲ್ಲಿ ಚರ್ಚೆಯ ವಿಷಯವಾಗುವ ಸಾಧ್ಯತೆ ಇದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.