Thursday, September 28, 2023
spot_img
- Advertisement -spot_img

ಬಂದ್ ವಾಪಸ್ ಬಳಿಕ ಏರ್‌ಪೋರ್ಟ್‌ ಟ್ಯಾಕ್ಸಿ ಸೇವೆ ಆರಂಭ

ಬೆಂಗಳೂರು : ನಗರ ಬಂದ್ ವಾಪಸ್ ಪಡೆದ ಬಳಿಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸಂಚಾರ ಪ್ರಾರಂಭವಾಗಿದೆ. ಖಾಸಗಿ ಸಾರಿಗೆ ಒಕ್ಕೂಟಗಳು ಇಂದು ಕರೆ ನೀಡಿದ್ದ ಬಂದ್ ಹಿನ್ನೆಲೆ ಸ್ಥಬ್ಧವಾಗಿದ್ದ ಟ್ಯಾಕ್ಸಿಗಳು ಮತ್ತೆ ರಸ್ತೆಗಿಳಿದಿವೆ.

ಬೆಳಿಗ್ಗೆ ಇಂದ ಜೋರಾಗಿದ್ದ ಹೋರಾಟದ ಕಾವಿನಿಂದ ಏರ್ಪೋರ್ಟ್‌ ಖಾಸಗಿ ಟ್ಯಾಕ್ಸಿಗಳು ತಮ್ಮ ಸಂಚಾರವನ್ನು ನಿಲ್ಲಿಸಿದ್ದವು. ಇದರಿಂದ ವಿಮಾನ ನಿಲ್ದಾನಕ್ಕೆ ಆಗಮಿಸಿದ್ದ ಪ್ರಯಾಣಿಕರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ : ಊಬರ್‌, ಆಟೋ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ : ಡಿಕೆಶಿ ಕಿಡಿ

ಸಮಯ ಕಳೆದಂತೆ ಕಡಿಮೆಯಾಗತೊಡಗಿತ್ತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟಿದ್ದ, ಖಾಸಗಿ ಸಾರಿಗೆ ಒಕ್ಕೂಟದ ಸಾವಿರಾರು ಚಾಲಕರು ಫ್ರೀಡಂ ಪಾರ್ಕ್ ವರೆಗೆ ಆಗಮಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದರು.

ಬಳಿಕ ಸ್ಥಳಕ್ಕಾಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಪ್ರತಿಭಟನಾಕಾರರ ಮನವಿ ಆಲಿಸಿ ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಸಚಿವರ ಮಾತಿಗೆ ಸಮ್ಮತಿ ವ್ಯಕ್ತಪಡಿಸಿದ ಪ್ರತಿಭಟನಾನಿರತ ಮುಖಂಡರು ಬಂದ್‌ ವಾಪಸ್‌ ಪಡೆಯುವ ಘೋಷಣೆ ಮಾಡಿದರು.

ಬಂದ್ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದ ಡಿಕೆಶಿ..

ಖಾಸಗಿ ವಾಹನದವರು ಬಂದ್ ಮಾಡುವ ಅವಶ್ಯಕತೆ ಇಲ್ಲ. ಖಾಸಗಿ ಬಸ್ಸಿನವರಿಗೆ ಸ್ವಲ್ಪ ತೊಂದರೆಯಾಗಿದೆ. ಅದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಊಬರ್, ಆಟೋ ಚಾಲಕರು ಪ್ರತಿಭಟನೆ ಬಹುಶಃ ಅದು ರಾಜಕೀಯ ಪ್ರೇರಣೆಯಿಂದ ನಡೆಯತ್ತಿದೆ ಎಂದು ಬಂದ್ ವಾಪಸ್‌ಗೂ ಮುನ್ನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದರು.

ಖಾಸಗಿ ಒಕ್ಕೂಟದ ಬಂದ್ ಬಗ್ಗೆ ನಗರದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಅವರು, ರಾಜಕೀಯ ಮಾಡಿದರೂ ನಾವು ಖಾಸಗಿ ಆಟೋ, ಊಬರ್ ನವರ ಬಗ್ಗೆ ಬಹಳ ಸಿಂಪಥಿಯಿಂದ ಇದ್ದೇವೆ. ಸಾರಿಗೆ ಒಕ್ಕೂಟದವರು ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ ಎಂದು ತಿಳಿಸಿದ್ದರು.

ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸುತ್ತದೆ. ಯಾವ ರೀತಿ ಅವರಿಗೆ ಸಹಕಾರ ಮಾಡಬಹುದೋ ನೋಡುತ್ತದೆ ಎಂದು ತಿಳಿಸಿದ್ದಾರೆ. ಅವರೆಲ್ಲರೂ ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಖಾಸಗಿ ಬಸ್ಸಿನವರಿಗೆ ತೊಂದರೆಯಾಗಿದ್ದು ನಿಜವಾಗಿದೆ ಎಂದು ಡಿಕೆಶಿ ಹೇಳಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles