Sunday, October 1, 2023
spot_img
- Advertisement -spot_img

‘ಕಂದಾಯ ಇಲಾಖೆಯಲ್ಲಿ ಬದಲಾವಣೆ ತರಬೇಕಾಗಿದೆ’

ಬೀದರ : ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಬೇಕಾದರೆ ಎಲ್ಲರೂ ತಮ್ಮ ತಮ್ಮ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುವ ಮೂಲಕ ಇಲಾಖೆಯಲ್ಲಿ ಬದಲಾವಣೆ ತರಬೇಕಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ನಾನು ಇಲ್ಲಿ ಬರೀ ಭಾಷಣ ಮತ್ತು ಘೋಷಣೆ ಮಾಡುವುದಕ್ಕೆ ಮಾತ್ರ ಬಂದಿಲ್ಲ. ಇಡೀ ಸರ್ಕಾರವೇ ಬಂದು ಇಲಾಖೆಯ ಅಧಿಕಾರಿಗಳ ಜೊತೆ ಮಾತಾಡುತ್ತಿದೆ ಎಂದು ಅಧಿಕಾರಿಗಳ ಬೆವರಿಳಿಸಿದರು.

ಇದನ್ನೂ ಓದಿ : ಚೀನಾ ಅಧ್ಯಕ್ಷರ ಜೊತೆ ಮೋದಿ ಮಾತುಕತೆ : ಗಡಿ ಕದನ ಇತ್ಯರ್ಥಕ್ಕೆ ಉಭಯ ನಾಯಕರ ಒಪ್ಪಿಗೆ

ಇಷ್ಟು ದಿನ ಏನು ನಡೆದಿದೆ ಎಂಬುವುದನ್ನು ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ, ಆದರೆ ಅವಕಾಶ ಇದೆ ಎನ್ನುವುದಾದರೆ ನಿಮ್ಮ ಜೊತೆ ಚರ್ಚಿಸಿ ಬದಲಾವಣೆ ತರಲು ಬಯಸುತ್ತೇನೆ ಎಂದು ಹೇಳಿದರು.

ಒಂದೊಂದು ಸಮಸ್ಯೆಗಳನ್ನು ನಿಮ್ಮ ಎದುರಿಗೆ ಇಟ್ಟು ಅದಕ್ಕೆ ಪರಿಹಾರ ಹುಡುಕುವ ಕೆಲಸ ಆಗಬೇಕಾಗಿದೆ. ನೀವು ಸಹ ಒಂದೊಂದು ಸಮಸ್ಯೆಗೆ ಯಾವ ರೀತಿ ಪರಿಹಾರ ನೀಡಬಹುದು ಎಂಬ ಉಪಾಯವನ್ನು ಹುಡುಕಬೇಕಾಗಿದೆ ಎಂದು ತಿಳಿಸಿದರು.

ಈ ಇಲಾಖೆಯಲ್ಲಿ ಕಂದಾಯ ನಿರೀಕ್ಷಕರು ಎಷ್ಟು ಮುಖ್ಯನೋ, ಗ್ರಾಮ ಲೆಕ್ಕಾಧಿಕಾರಿಯು ಅಷ್ಟೇ ಮುಖ್ಯವಾಗಿರುತ್ತಾರೆ. ಅಲ್ಲದೆ ಮಿಸ್ಟರ್ ವರೆಗೂ ಎಲ್ಲರೂ ಸಹ ಅಷ್ಟೇ ಮುಖ್ಯವಾಗಿ ಬೇಕಾಗುತ್ತಾರೆ. ಎಲ್ಲರೂ ಸಮಾನವಾಗಿ ಅವರವರ ಕೆಲಸ ಮಾಡಿದರೆ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಸಚಿವರು ಅಧಿಕಾರಿಗಳಿಗೆ ಸಲಹೆ ನೀಡಿದ ಅವರು ಕೊಟ್ಟ ಮಾತಿನಂತೆ ಅಧಿಕಾರಿಗಳು ನಡೆದುಕೊಳ್ಳುತ್ತೀರಾ ಎಂಬ ನಂಬಿಕೆ ನನಗಿದೆ ಎಂದರು.

ಸಭೆಯಲ್ಲಿ ಅರಣ್ಯ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಅರವಿಂದ್ ಕುಮಾರ್ ಅರಳಿ ಚಂದ್ರಶೇಖರ್ ಪಾಟೀಲ್, ಭೀಮರಾವ್ ಪಾಟೀಲ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles