Monday, December 11, 2023
spot_img
- Advertisement -spot_img

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಂದಾಯ ಸಚಿವ ಕೃಷ್ಣಭೈರೇಗೌಡ

ತುಮಕೂರು: ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡರನ್ನು ಕಂಡು, ಅಧಿಕಾರಿಗಳು ಹಾಗೂ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು, ಸಚಿವರ ಕಾರ್ಯವೈಖರಿಗೆ ಪ್ರಶಂಸೆಗಳು ಕೇಳಿ ಬರುತ್ತಿವೆ.

ಬೆಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ಸಚಿವರು ಮಾರ್ಗಮಧ್ಯೆ ಜಿಲ್ಲೆಯ ತುರುವೇಕೆರೆ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಚೇರಿಯಲ್ಲಿ ಸೇರಿದ್ದ ಜನ ಸಚಿವರ ಮುಂದೆ ಸಾಲು ಸಾಲಾಗಿ ಸಮಸ್ಯೆ ಹೇಳಿಕೊಂಡಿದ್ದಾರೆ. ಸಚಿವರು ಎಲ್ಲರ ಸಮಸ್ಯೆಯನ್ನು ಸಮಾಧಾನದಿಂದ ಆಲಿಸಿದ್ದಾರೆ. ರೈತರ ಸಮಸ್ಯೆಗೆ ಇನ್ನೂ ಪರಿಹಾರ ಒದಗಿಸದ ಅಧಿಕಾರಿಗಳನ್ನು ಜನರ ಎದುರೇ ತರಾಟೆಗೆ ತೆಗೆದುಕೊಂಡು, ಶೀಘ್ರ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: UNESCO World Heritage Site Hampi: ವಿಶ್ವ ಪಾರಂಪರಿಕ ತಾಣದಲ್ಲಿಲ್ಲ ಕನಿಷ್ಠ ಮೂಲ ಸೌಕರ್ಯ

ಈ ಸಂದರ್ಭದಲ್ಲಿ ಖುದ್ದು ತಾನೇ ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವ ಕೃಷ್ಣ ಭೈರೇಗೌಡ, ಜಮೀನಿನಲ್ಲಿ ಓಡಾಡಲು ರಸ್ತೆ ಇಲ್ಲ ಎಂದು ಅಳಲು ತೊಡಿಕೊಂಡ ರೈತರೊಬ್ಬರಿಗೆ ಕೂಡಲೇ ದಾರಿ ಮಾಡಿಕೊಡುವಂತೆ ತಹಶೀಲ್ದಾರ್ ರೇಣುಕುಮಾರ್ ಗೆ ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಯಾವ ಸಮಸ್ಯೆಗಳಿಗೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಅಧಿಕಾರಗಳ ಮೇಲೆ ದೂರು ನೀಡಿದ್ದಾರೆ. ಅಧಿಕಾರಿಗಳ ಈ ಕರ್ತವ್ಯ ಲೋಪಕ್ಕೆ ಸಚಿವರು ಗರಂ ಆಗಿದ್ದಾರೆ. ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಚುನಾವಣೆ: ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles