ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಯವರನ್ನು ನಟ ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ ಮಾಡಿದ್ದು, ಕಾಡಿನ ಜನರ ಬೇಡಿಕೆ ಈಡೇರಿಸಿ ಎಂದು ಮನವಿ ಸಲ್ಲಿಸಿದ್ದಾರೆ.
ಸಿಎಂ ಭೇಟಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ರಿಷಬ್ ಪೋಸ್ಟ್ ಮಾಡಿದ್ದಾರೆ. ಕಾಡಿನಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ಮಾತನಾಡಿದ್ದೇನೆ, ಅವರ ಕಷ್ಟಗಳು ಏನು ಅಂತಾ ಪಟ್ಟಿಮಾಡಿ, ಆ ಪಟ್ಟಿಯನ್ನು ಸಿಎಂಗೆ ನೀಡಿದ್ದೇನೆ , ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿಡಿಯೋ ಮೂಲಕ ಹೇಳಿದ್ದಾರೆ.
ಕಾಂತಾರ ಚಿತ್ರದ ನಂತರ ಅನೇಕ ಕಾಡುಗಳಿಗೆ ಭೇಟಿ ನೀಡಿದ್ದಾರಂತೆ. ಕರ್ನಾಟಕದ ನಾನಾ ಭಾಗಗಳಲ್ಲಿ ಸಂಚರಿಸಿದ್ದಾರಂತೆ. ಕಾಡಿನ ಪಕ್ಕದಲ್ಲೇ ವಾಸಿಸುವ ಅನೇಕರಿಗೆ ಏನೆಲ್ಲ ಕಷ್ಟ ಪಡುತ್ತಿದ್ದಾರೆ, ಅವರಿಗೆ ಏನೆಲ್ಲ ಪರಿಹಾರ ನೀಡಬಹುದು ಹಾಗೂ ಕಾಡು ಪ್ರಾಣಿಗಳಿಂದ ಯಾವ ರೀತಿಯಲ್ಲಿ ತೊಂದರೆ ಆಗುತ್ತಿದೆ ಮತ್ತು ಅರಣ್ಯ ಸಿಬ್ಬಂದಿ ಎಷ್ಟೆಲ್ಲ ಸಂಕಟಗಳನ್ನು ಅನುಭವಿಸುತ್ತಿದ್ದಾರೆ ಎನ್ನುವುದನ್ನು ಸಿಎಂ ಬೊಮ್ಮಾಯಿಯವರಿಗೆ ತಿಳಿಸಿದ್ದಾರೆ.
ಸಮಸ್ಯೆಗೆ ತಕ್ಷಣ ಸ್ಪಂದಿಸುವ ಸಿಎಂ ಇರೋದಕ್ಕೆ ನಾವು ಧನ್ಯರು ಎಂದೂ ತಿಳಿಸಿದ್ದಾರೆ.ಸಮಸ್ಯೆಗೆ ಸ್ಪಂದಿಸಿದ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದಗಳು” ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.