ಬೆಂಗಳೂರು: ರೂಪಾ ಮೌದ್ಗಿಲ್, ರೋಹಿಣಿ ಸಿಂಧೂರಿ ಜಗಳ ಕೋರ್ಟ್ ಮೇಟ್ಟಿಲೇರಿದ್ದು ಗೊತ್ತೇ ಇದೆ, ಇವರಿಬ್ಬರ ಕಿತ್ತಾಟದಲ್ಲಿ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ಸರ್ಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ.
ರೋಹಿಣಿ ಸಿಂಧೂರಿಯವರ ಪರ ವಕೀಲರು ರೂಪಾ ಅವರಿಗೆ ಲೀಗಲ್ ನೊಟೀಸ್ ಕಳುಹಿಸಿದ್ದಾರೆ. ಅಲ್ಲದೆ ನೊಟೀಸ್ ನಲ್ಲಿ ರೋಹಿಣಿ ಸಿಂಧೂರಿಯವರ ಮಾನಹಾನಿ ಮಾಡುವ ಫೋಟೋಗಳು, ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಿಂದ ತೆಗೆಯುವಂತೆ ರೂಪಾರಿಗೆ ಸೂಚಿಸಿದ್ದು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ನೊಟೀಸ್ ನಲ್ಲಿ ಆಗ್ರಹಿಸಿದ್ದಾರೆ.
ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಖಾಸಗಿ ಫೋಟೋಗಳು ಮತ್ತು ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮಾನಹಾನಿಯಾಗಿದ್ದು ತಮಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಒಟ್ಟು 21 ಅಂಶಗಳನ್ನು ಉಲ್ಲೇಖಿಸಿ ಲೀಗಲ್ ನೋಟಿಸ್ ನೀಡಿದ್ದು, ಕ್ಷಮೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಹೂಡೋದಾಗಿ ತಿಳಿಸಿದ್ದಾರೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ಫೇಸ್ ಬುಕ್ ಪೇಜ್ ನಲ್ಲಿ ಕ್ಷಮಾಯಾಚಿಸಬೇಕು ಎಂದು ಕೋರಿದ್ದಾರೆ.