ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಇವರಿಬ್ಬರ ಜಗಳ ನೋಡಲಾಗದೇ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿತ್ತು.
ನನ್ನ ಮೊಬೈಲ್ ನಿಂದ ಕಾನೂನು ಬಾಹಿರವಾಗಿ ರೂಪಾ ಮಾಹಿತಿ ಪಡೆದಿದ್ದಾರೆ. ರೂಪ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಐಪಿಎಸ್ ಆಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕಾನೂನು ಹೋರಾಟ ಆರಂಭಿಸಿದ್ದಾರೆ. ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಈಗ ಕೋರ್ಟ್ ಮೆಟ್ಟಿಲೇರಿದೆ.
ರೋಹಿಣಿ ಸಿಂಧೂರಿ ರೂಪಾ ತಮ್ಮ ಬಗ್ಗೆ ವಿಚಾರ ಪ್ರಸ್ತಾಪ ಮಾಡದಂತೆ ನಿರ್ಬಂಧಕಾಜ್ಞೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ರೋಹಿಣಿ ಪರ ವಕೀಲರಿಂದ ವಾದ ಮಂಡನೆ ಮಾಡಲಾಗುತ್ತದೆ. ಸಿವಿಲ್ ಸರ್ವೀಸ್ ನಿಯಮಗಳ ಅಡಿ ಸಿಎಸ್ ಗೆ ದೂರು ನೀಡಲಾಗಿದೆ.
ಪೊಲೀಸ್ ಠಾಣೆಗೂ ರೂಪ ವಿರುದ್ಧ ದೂರು ನೀಡಿದ್ದೇನೆ ಎಂದು ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ಇಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಪರ ವಕೀಲರಿಂದ ವಾದ ಮಂಡನೆ ಮಾಡಿದ್ದು,ಇನ್ನು ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿಕೆ ಮಾಡಿದೆ.