ಪರಪ್ಪನ ಅಗ್ರಹಾರದಲ್ಲಿ ರೌಡಿಗಳಿಗೆ, ಉಗ್ರರಿಗೆ ರಾಜಾತಿಥ್ಯ: ಗೃಹ ಇಲಾಖೆ ಸತ್ತು ಹೋಗಿದೆ ಎಂದ ಅಶೋಕ್

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸುತ್ತಾರೆ. ಇವರ ಮೇಲಿದ್ದ ಎಲ್ಲಾ ಕೇಸ್​ಗಳನ್ನೂ ವಾಪಸ್ ಪಡೆದರು. ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿ ಉಗ್ರ ಕೃತ್ಯದಲ್ಲಿ ಅರೆಸ್ಟ್ ಆದವರಿಗೆ ಮೊಬೈಲ್ ಕೊಡುತ್ತಾರೆ. ರಾಜ್ಯ ಸರ್ಕಾರದ ಗೃಹ ಇಲಾಖೆ ಸತ್ತೇ ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆಯಲ್ಲಿ ಕಸ ಇರುವ ಕಾರಣ ರಸ್ತೆಗಳು ಬ್ಲಾಕ್​​ ಆಗಿವೆ. ರಸ್ತೆಗಳು ಬ್ಲಾಕ್ ಆಗಿರುವುದರಿಂದ ಫುಟ್​ಪಾತ್​​ನಲ್ಲಿ ಬೈಕ್ ಸಂಚರಿಸುತ್ತಿದ್ದಾರೆ. ಪಣತ್ತೂರಿನಲ್ಲಿ ಟನಲ್​​ನಲ್ಲಿ ಜನ ಸಂಚಾರ ಮಾಡುತ್ತಿದ್ದಾರೆ. ತೆರಿಗೆ ಹಣವನ್ನೆಲ್ಲಾ ತೆಗೆದುಕೊಂಡು ಗ್ಯಾರಂಟಿಗಳಿಗೆ ಹಾಕಿದ್ದಾರೆ. ಒಂದೊಂದು ರಸ್ತೆಗೆ ₹25 ಕೋಟಿಯಿಂದ ₹30 ಕೋಟಿ ರೂಪಾಯಿ ಬಿಲ್ ಬಾಕಿ ಇದೆ.

ಗುಂಡಿಗಳಲ್ಲೇ ಜನರನ್ನು ಹಾಕಿ ಮುಚ್ಚುತ್ತಿದ್ದಾರೆ..!
ಇನ್ನು ಮತಗಳ್ಳತನದ ವಿರುದ್ಧ ಕಾಂಗ್ರೆಸ್​ನಿಂದ ಸಹಿ ಸಂಗ್ರಹ ಅಭಿಯಾನ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್​ನವರಿಗೆ ಯಾವುದು ಆದ್ಯತೆ ಅಂತಾ ಗೊತ್ತಾಯ್ತು ಅಲ್ವಾ? ಕಾಂಗ್ರೆಸ್​ನವರಿಗೆ ರಸ್ತೆಗಳು, ಕಸದ ಸಮಸ್ಯೆ ಆದ್ಯತೆ ಆಗಲಿಲ್ಲ. ಆದರೆ ಇವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ಮೆಚ್ಚಿಸಬೇಕು. ಯೋಗ್ಯತೆ ಇದ್ದರೆ ದೂರು ಕೊಡಲಿ, ನ್ಯಾಯಾಲಯಕ್ಕೆ ಹೋಗಲಿ. ಮಾನ ಮರ್ಯಾದೆ ಇದ್ದರೆ ಬಂದು ರಸ್ತೆ ಗುಂಡಿ ಮುಚ್ಚಬೇಕಿತ್ತು. ಆದರೆ ಗುಂಡಿಗಳಲ್ಲಿ ಜನರನ್ನು ಹಾಕಿ ಮುಚ್ಚುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯನೇ ಸಿಎಂ ಆಗಿ ಮುಂದುವರೆಯದಿದ್ರೆ ಸರ್ಕಾರ ಪತನ: ಶೆಟ್ಟರ್ ಸ್ಫೋಟಕ ಭವಿಷ್ಯ

ಎರಡು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಬರೀ ಗ್ಯಾರಂಟಿ ಯೋಜನೆಯೊಂದೇ ಸಾಧನೆ ಅಂತ ಹೇಳುತ್ತಿದೆ. ರಸ್ತೆ ಗುಂಡಿ ಮುಚ್ಚಲು 1800 ಕೋಟಿ ರೂ. ಖರ್ಚು ಮಾಡಿದ್ದೇವೆ ಅಂತಾರೆ. ರಸ್ತೆ ಗುಂಡಿಗಳನ್ನು ಮುಚ್ಚಿದ್ದರೆ ಯಾಕೆ ಗುಂಡಿಗಳಿವೆ. ಬಿಜೆಪಿ ಹಿಂದೆ ಗುಂಡಿ ಮುಚ್ಚಿಲ್ಲ ಅಂತಾರೆ, ಒಂದು ವಾರ ಗಡುವು ಕೊಡಿ ಅಂತ ಸಿಎಂ ಹೇಳುತ್ತಾರೆ. 1 ವಾರ ಆದ ಮೇಲೆ ಡಿ.ಕೆ.ಶಿವಕುಮಾರ್ ಕೇಳಿ ಅಂತಾರೆ. ಜವಾಬ್ದಾರಿ ಇಲ್ಲದೇ ಮಾತಾಡುವ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದಿದ್ದಾರೆ.

ಬೆಂಗಳೂರಿನ ಜನರ ಶಾಪ ಕಾಂಗ್ರೆಸ್​ನವರಿಗೆ ತಟ್ಟೇ ತಟ್ಟುತ್ತದೆ. ಮಾಲೂರು ಪ್ರಕರಣದಲ್ಲಿ ನ್ಯಾಯಾಲಯ ಛೀಮಾರಿ ಹಾಕಿದೆ. ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮತ್ತು ಟೀಮ್ ವೋಟ್ ಚೋರಿ ಮಾಡಿದೆ ಅಂತಾ ಸ್ಪಷ್ಟವಾಗಿ ನ್ಯಾಯಾಲಯದ ಆದೇಶ ಬಂದಿದೆ. ಅಲ್ಲಿನ ಡಿಸಿ ಮತದಾನದ ಎಲ್ಲಾ ವಿಡಿಯೋಗಳು ನಾಶಪಡಿಸಿದ್ದಾರೆ. ಕಾಂಗ್ರೆಸ್ ಮಾಡಿರುವ ಮತಗಳ್ಳತನ ಬಿಜೆಪಿ ಮೇಲೆ ಹಾಕ್ತಿದ್ದಾರೆ ಅಷ್ಟೇ ಎಂದು ಆರ್.ಅಶೋಕ್ ಹೇಳಿದ್ದಾರೆ.

Leave a Reply

Your email address will not be published. Required fields are marked *