ರಾಯಚೂರು : ರಾಜ್ಯಾದ್ಯಂತ ‘ಗೃಹಲಕ್ಷ್ಮಿ’ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ಬಹಳ ಸಂಭ್ರಮದಿಂದ ನಡೆಯುತ್ತಿದ್ದರೆ, ರಾಯಚೂರಿನಲ್ಲಿ ಗಲಾಟೆಗೆ ಕಾರಣವಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ನಮ್ಮ ಪತ್ನಿಯರನ್ನು ಒತ್ತಾಯಪೂರ್ವಕವಾಗಿ ಗೃಹಲಕ್ಷಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬರುವಂತೆ ಮಾಡಿದ್ದಾರೆ ಎಂದು ಕೆಲ ಪುರುಷರು ತಗಾದೆ ತೆಗೆದಿದ್ದಾರೆ. ಇಂದಿನ ಕಾರ್ಯಕ್ರಮಕ್ಕೆ ಬರದಿದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ ಎಂದು ಸುಳ್ಳು ಹೇಳಿ ನಮ್ಮ ಪತ್ನಿಯರನ್ನು ಕರೆಸಿಕೊಂಡಿದ್ದಾರೆ. ಅವರ ಸಲುವಾಗಿ ನಾವು ಕೆಲಸ, ಕಾರ್ಯ ಬಿಟ್ಟು ಬಂದಿದ್ದೇವೆ ಎಂದು ಪುರುಷರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಖಾತೆಗೆ ಹಣ ಹಾಕುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಬರಲೇಬೇಕು ಎಂದು ಎಲ್ಲೂ ಹೇಳಿಲ್ಲ. ಹಾಗಿರುವಾಗ, ಅಂಗನವಾಡಿ ಕಾರ್ಯಕರ್ತೆಯರು ಜನ ಸೇರಿಸುವ ಸಲುವಾಗಿ ಸುಳ್ಳು ಹೇಳಿ ಕರೆಸಿಕೊಂಡಿದ್ದಾರೆ ಎಂದು ಪುರುಷರು ಆರೋಪಿಸಿದ್ದಾರೆ. ಸ್ಥಳದಲ್ಲಿದ್ದ ಅಧಿಕಾರಿಗಳು ಅವರನ್ನು ಸಮಾಧಾನಗೊಳಿಸುವ ಪ್ರಯತ್ನ ಮಾಡಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿಗೆ ಇಂದು ಚಾಲನೆ ಸಿಗ್ತಿದೆ. ರಾಜ್ಯಮಟ್ಟದ ಕಾರ್ಯಕ್ರಮ ಮೈಸೂರಿನಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದು, ಪ್ರತೀ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯುತ್ತಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.