ಬೆಂಗಳೂರು : ಸಂಸದೆ ಹಾಗು ನಟಿ ರಮ್ಯಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ, ಇಂದು ಬೆಳಗ್ಗೆ ಭಾರಿ ಟ್ರೆಂಡ್ ಕೂಡ ಆಗುತ್ತಿದೆ.
ಎಸ್‌ಎಸ್ ಮ್ಯೂಸಿಕ್, ದಿನಕರನ್ ಹಾಗೂ ಕೆಲವೊಂದು ಅಧಿಕೃತ ಟ್ವಿಟರ್ ಪೇಜ್‌ಗಳು ಕೂಡ ನಟಿ ರಮ್ಯಾ ಅವರ ಫೋಟೋಗಳು ಪೋಸ್ಟ್ ಮಾಡಿ ಕಾರ್ಡಿಯಾಕ್ ಅರೆಸ್ಟ್‌ನಿಂದ ನಿಧನರಾಗಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ. ಆದರೆ, ಮೂಲಗಳ ಪ್ರಕಾರ ತಮಿಳಿನಲ್ಲಿ ರಮ್ಯಾ ಹೆಸರಿನ ಸಣ್ಣ ನಟಿಯೊಬ್ಬರು ನಿಧನರಾಗಿದ್ದು, ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಮೋಹಕತಾರೆ ರಮ್ಯಾ ಅವರು ನಿಧನರಾಗಿದ್ದಾರೆ ಎಂದು ಸುದ್ದಿ ಮಾಡಲಾಗಿತ್ತು.
ಇದನ್ನೂ ಓದಿ : ಇಂಡಿಯಾ ಮರುನಾಮಕರಣ ಬಹಳ ಒಳ್ಳೆಯ ವಿಷಯ : ಆರಗ ಜ್ಞಾನೇಂದ್ರ
ರಮ್ಯಾ ಸಾವಿನ ಸುದ್ದಿ ಹರಿದಾಡುತ್ತಿರುವವುದು ಶುದ್ಧ ಸುಳ್ಳು. ಇನ್ನು ರಮ್ಯಾ ಜೊತೆ ಸ್ವಿಜರ್ಲೆಂಡ್‌ನ ಜಿನೇವಾದಲ್ಲಿರುವ ಪತ್ರಕರ್ತೆ ಚಿತ್ರಾ ಸುಬ್ರಮಣ್ಯಂ ಕೂಡ ಟ್ವೀಟ್ ಮಾಡಿ ರಮ್ಯಾ ಅವರಿಗೆ ಏನೂ ಆಗಿಲ್ಲ ಎಂದು ಖಚಿತಪಡಿಸಿದ್ದಾರೆ.
‘ಈಗ ತಾನೆ ನಾನು ರಮ್ಯಾ ಅವರ ಜೊತೆ ಮಾತನಾಡಿದೆ. ಆಕೆ ಚೆನ್ನಾಗಿಯೇ ಇದ್ದಾರೆ. ಈಗ ಜೆಕ್ ಗಣರಾಜ್ಯದ ಪ್ರೇಗ್‌ಗೆ ತೆರಳುತ್ತಿದ್ದು, ಆ ಬಳಿಕ ಬೆಂಗಳೂರಿಗೆ ವಾಪಾಸಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ‘ಹುಚ್ಚ ಕೂಡಾ ಪ್ರಕಾಶ್ ರಾಜ್‌ಗಿಂತ ಉತ್ತಮವಾಗಿ ಮಾತಾಡ್ತಾನೆ’
ಅದಕ್ಕೂ ಮುನ್ನ ರಮ್ಯಾ ಜೊತೆಯಲ್ಲಿ ಜಿನೇವಾದಲ್ಲಿ ಇರುವ ಫೋಟೋ ಅವರು ಹಂಚಿಕೊಂಡಿದ್ದಾರೆ. ಅತ್ಯಂತ ಪ್ರತಿಭಾವಂತ ಮತ್ತು ಸೌಮ್ಯ ಮಹಿಳೆ ರಮ್ಯಾರನ್ನು ಜನೇವಾದಲ್ಲಿ ಭೇಟಿ ಮಾಡಿದೆ. ಬೆಂಗಳೂರಿನ ಮೇಲಿನ ಪ್ರೀತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ. ಅದರೊಂದಿಗೆ ರಮ್ಯಾ ಜೊತೆಗಿನ ಸೆಲ್ಫಿಯನ್ನೂ ಕೂಡ ಹಂಚಿಕೊಂಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.