ಬೆಂಗಳೂರು : ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಾಧು ಕೋಕಿಲರನ್ನು ಡಿಕೆಶಿ ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದು, ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.
ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾರವರು ಕಾಂಗ್ರೆಸ್ ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಮೊನ್ನೆಯಷ್ಟೇ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಗೆ ಮೋಸ ಮಾಡಿದರೇ ತಂದೆ ತಾಯಿಗೆ ಮೋಸ ಮಾಡಿದಂತೆ, ಕಾಂಗ್ರೆಸ್ ಗೂ ಮತ್ತು ಜನರಿಗೂ ಇರುವ ಸಂಬಂಧ ಕೇವಲ ರಾಜಕೀಯದ್ದಲ್ಲ, ಹೃದಯದ ಸಂಬಂಧ , ಕಾಂಗ್ರೆಸ್ ಗೆ ಮತ ಹಾಕದಿದ್ದರೇ ತಂದೆ-ತಾಯಿಗೆ ಮೋಸ ಮಾಡಿದಂತೆ ಎಂದು ಹೇಳಿದ್ದರು.