ಮೇಘಾಲಯ : ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮಾರ್ಚ್ 7 ರಂದು ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಎನ್ಪಿಪಿ ಶಾಸಕ ಪ್ರೆಸ್ಟೋನ್ ಟೈನ್ಸಾಂಗ್ ಮಾಹಿತಿ ನೀಡಿದ್ದಾರೆ. ಇಂದು ನಾವು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಮತ್ತು ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ. ನಮ್ಮ ಬಳಿ ಸಾಕಷ್ಟು ಶಾಸಕರ ಸಂಖ್ಯೆಯಿದೆ” ಎಂದು ಪ್ರೆಸ್ಟೋನ್ ಟೈನ್ಸಾಂಗ್ ಹೇಳಿದರು.
ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಪಕ್ಷದ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ರಾಜ್ಯಪಾಲ ಫಾಗು ಚೌಹಾಣ್ ರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೋರಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ಪ್ರಮಾಣ ವಚನ ಸಮಾರಂಭದ ದಿನಾಂಕವನ್ನು ಸದ್ಯ ನಿರ್ಧರಿಸಿಲ್ಲ, ಆದ್ರೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಕರೆಯಬೇಕು ಎಂದುಕೊಂಡಿದ್ದೇವೆ ಆದ್ರೆ ಅವರ ಭಾಗವಹಿಸುವಿಕೆಯ ಬಗ್ಗೆ ದೃಢೀಕರಣ ಪಡೆದ ನಂತರವೇ ತಿಳಿಸುತ್ತೇವೆ ಎಂದರು.