ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿಗೆ ಸಿಟಿ ಸಿವಿಲ್ ಕೋರ್ಟ್ ಬ್ರೇಕ್ ಹಾಕಿದ್ದ ವಿಚಾರ ಎಲ್ಲೆಡೆ ಸುದ್ದಿಯಾಗಿದೆ. ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು.
ವಿನಾಕಾರಣ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರೋ ರೂಪಾ ಅವರು ಮಾತನಾಡದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಐಜಿಪಿ ಡಿ. ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಸಿಂಧೂರಿ ಪರ ವಕೀಲರು, ಡಿ ರೂಪಾ ಅವರು ಸೈಬರ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಇದರಿಂದ ಅವರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ನಿರ್ಬಂಧಕಾಜ್ಞೆಗೆ ನೀಡಿ, ರೂಪ ಅಧಿಕಾರ ದುರುಪಯೋಗವಾಗಿದೆ ಎಂದು ಕೋರ್ಟ್ ಅಲ್ಲಿ ವಾದ ಮಂಡಿಸಿದ್ದರು.
ಈ ವೇಳೆ ರೋಹಿಣಿ ಸಿಂಧೂರಿ ಅವರ ವಾದ ಆಲಿಸಿದ ಕೋರ್ಟ್ ರೋಹಿಣಿ ಸಿಂಧೂರಿ ಅವರ ವಿರುದ್ಧ ರೂಪಾ ಮಾತನಾಡದಂತೆ ತಡೆಯಾಜ್ಞೆ ನೀಡಿತ್ತು. ನಂತರ ಐಪಿಎಸ್ಅಧಿಕಾರಿ ಡಿ.ರೂಪಾ ಪರ ವಕೀಲರು ತಮ್ಮ ಮನವಿ ಪುರಸ್ಕರಿಸುವಂತೆ ಮನವಿ ಮಾಡಿಕೊಂಡರು. ಈ ಹಿನ್ನೆಲೆಯಲ್ಲಿ ಕೋರ್ಟ್ ರೂಪಾ ಪರ ವಕೀಲರ ಮನವಿ ಪುರಸ್ಕರಿಸಿದೆ.
ನನಗೆ ಬೆಂಬಲ ಕೋರಿ ಮಾಡಿದ ಸಂದೇಶಗಳಿಂದ ನನ್ನ ಮೆಸೇಜ್ ಬಾಕ್ಸ್ ಪ್ರವಾಹದಂತೆ ತುಂಬಿ ಹೋಗಿದೆ, ನನಗೆ ಅತೀವ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದು ಕೊನೆಯಲ್ಲಿ `ಸತ್ಯ ಮೇವ ಜಯತೆ’ ಎಂದು ಬರೆದು ಪೋಸ್ಟ್ ಹಂಚಿಕೊಂಡಿದ್ದಾರೆ.