Monday, March 27, 2023
spot_img
- Advertisement -spot_img

ರಾಜ್ಯ ಸರ್ಕಾರದ ಸೂಚನೆಯಂತೆ ಪೊಲೀಸ್‌ ಅಧಿಕಾರಿಗಳಿಂದ ಭದ್ರತೆ : ಪಾರ್ಟಿ ಮಾಡೋರು ಜವಾಬ್ದಾರಿಯಿಂದ ವರ್ತಿಸಿ

ಬೆಂಗಳೂರು: ಕೊರೋನಾ ಹಿನ್ನೆಲೆ ಹೊಸ ವರ್ಷಕ್ಕೆ ರಾಜ್ಯ ಸರ್ಕಾರದ ಸೂಚನೆಯಂತೆ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಬಂದೋಬಸ್ತ್ ಗೆ ನಿರ್ಧರಿಸಿದ್ದಾರೆ. ನೂತನ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಪಾರ್ಟಿ ಪ್ರಿಯರ ನೆಚ್ಚಿನ ತಾಣಗಳಾದ ಕೋರಮಂಗಲ, ಹೆಚ್ಎಸ್ಆರ್ ಲೇಔಟ್ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಪಾರ್ಟಿಗಳು ಆಯೋಜನೆಯಾಗುವ ಸ್ಥಳಗಳಲ್ಲಿ ಒಳಾಂಗಣ ಹಾಗೂ ಹೊರಾಂಗಣ ಎಂದು ಎರಡು ವಿಭಾಗಗಳಲ್ಲಿ ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ ಕೆ ಬಾಬಾ ತಿಳಿಸಿದ್ದಾರೆ. ಅಲ್ಲದೇ ಪಾರ್ಟಿಯಲ್ಲಿ ಅನುಚಿತ ವರ್ತನೆ ಕಂಡುಬಂದರೆ ಕಠಿಣ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಪಾರ್ಟಿಯಲ್ಲಿ ಆರೋಗ್ಯ ಸಮಸ್ಯೆ ಅಥವಾ ಅಸ್ವಸ್ಥರಾದರೆ ನೆರವಿಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಬೆಡ್ಗಳನ್ನು ಕಾಯ್ದಿರಿಸಲಾಗಿದೆ. ರಾಜ್ಯ ಸರ್ಕಾರದ ನಿಯಮದಂತೆ ಪಬ್, ಹೋಟೆಲ್ಗಳಲ್ಲಿ ರಾತ್ರಿ ಒಂದು ಗಂಟೆ ತನಕ ಪಾರ್ಟಿಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ನಂತರದಲ್ಲಿ ತಮ್ಮ ತಮ್ಮ ಮನೆಗೆ ತೆರಳುವವರು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಪಾರ್ಟಿ ಆಯೋಜನೆಯಾಗುವ ಸ್ಥಳಗಳ ಬಳಿ ಹೊರಾಂಗಣದಲ್ಲಿ ಮತ್ತು ರಸ್ತೆಯಲ್ಲಿ ಹೆಚ್ಚಿನ ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪಾರ್ಟಿಗೆ ಬರುವ ಪ್ರತಿಯೊಬ್ಬರ ಮಾಹಿತಿ ಹಾಗೂ ಫೋಟೋಗಳನ್ನು ಪೊಲೀಸ್ ಸಿಬ್ಬಂದಿ ಪಡೆಯಲಿದ್ದಾರೆ. ಜೊತೆಗೆ ಪಬ್, ಹೋಟೆಲ್, ರೆಸ್ಟೋರೆಂಟ್ಗಳ ಪ್ರವೇಶದ್ವಾರದಲ್ಲಿ ಸಿಸಿಟಿವಿಗಳನ್ನ ಅಳವಡಿಸಲಾಗಿದೆ‌. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಲೈವ್ ಎಲ್ಇಡಿ ಮೇಲೆ ಬಿತ್ತರವಾಗಲಿವೆ.ಪಾರ್ಟಿಯಲ್ಲಿ ಭಾಗಿಯಾಗುವವರು ಸಹ ಜವಾಬ್ದಾರಿಯಿಂದ ವರ್ತಿಸಬೇಕಿದ್ದು, ಅಪರಿಚಿತರನ್ನು ಸಂಪರ್ಕಿಸುವ ಮೊದಲು ಎಚ್ಚರವಿರಲಿ ಎಂದು ತಿಳಿಸಿದ್ದಾರೆ.

Related Articles

- Advertisement -

Latest Articles