ಚೆನ್ನೈ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ-ಎಂ) ಹಿರಿಯ ನಾಯಕ ಎನ್.ಶಂಕರಯ್ಯ (102) ಅವರು ತಮಿಳುನಾಡಿನ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶಂಕರಯ್ಯ ಅವರ ಪಾರ್ಥಿವ ಶರೀರವನ್ನು ಕ್ರೋಮ್‌ಪೇಟ್‌ನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕಾಗಿ ಇಲ್ಲಿನ ಸಿಪಿಎಂ ಪ್ರಧಾನ ಕಚೇರಿಯಲ್ಲಿ ಇಡಲಾಗುವುದು ಎಂದು ಸಿಪಿಎಂ ಮೂಲಗಳು ತಿಳಿಸಿವೆ.


ಶಂಕರಯ್ಯ ಅವರ ನಿಧನದ ಸುದ್ದಿ ತಿಳಿದ ಬೆನ್ನಲ್ಲೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಹಿರಿಯ ಸಚಿವರೊಂದಿಗೆ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಇದನ್ನೂ ಓದಿ: ದೆಹಲಿಯಲ್ಲಿ ಹದಗೆಟ್ಟ ವಾಯು ಮಾಲಿನ್ಯ: ಜೈಪುರಕ್ಕೆ ಶಿಫ್ಟ್ ಆದ ಸೋನಿಯಾ ಗಾಂಧಿ
ಸ್ಟಾಲಿನ್ ಅವರು ಶಂಕರಯ್ಯ ಅವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಅಲ್ಲದೆ ಸರ್ಕಾರಿ ಗೌರವಗಳೊಂದಿಗೆ ಶಂಕರಯ್ಯ ಅಂತ್ಯಕ್ರಿಯೆ ನೆರವೇರಿಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.