Wednesday, May 31, 2023
spot_img
- Advertisement -spot_img

ನಿಮ್ಮ ನಡೆ ಕರ್ನಾಟಕದ ಯುವ ಜನಾಂಗಕ್ಕೆ ದಾರಿದೀಪವಾಗಲಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರು: ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸ್ವಾಗತಿಸಿದ್ದಾರೆ.

ನಿಮ್ಮ ನಡೆ ಕರ್ನಾಟಕದ ಯುವ ಜನಾಂಗಕ್ಕೆ ದಾರಿದೀಪವಾಗಲಿ, ರಾಜ್ಯದ ಜನರಿಗೆ ನಿಮ್ಮ ಸೇವೆ ಬೇರೆ ರೂಪದಲ್ಲಿ ದೊರೆಯಲಿ ಎಂದು ಹೇಳಿದ್ದಾರೆ. “ಯಡಿಯೂರಪ್ಪ ಗುಡುಗಿದರೆ ವಿಧಾನಸಭೆ ನಡುಗುವುದು” ಎನ್ನುವ ಮಟ್ಟಿಗೆ ನಿಮ್ಮ ಧ್ವನಿ ವಿಧಾನಸೌಧದಲ್ಲಿ ಮೊಳಗಿದೆ. ನಾವಿಬ್ಬರೂ ಒಂದೇ ಜಿಲ್ಲೆಯಿಂದ ಬಂದವರಾದರೂ ಹಲವು ಯುವನಾಯಕರನ್ನು ಸೃಷ್ಟಿಸಿ ಯಶಸ್ವಿ ನಾಯಕರನ್ನಾಗಿ ಮಾಡಿದ್ದೀರಿ , ಚುನಾವಣಾ ರಾಜಕೀಯದಿಂದ ವಿರಮಿಸುತ್ತಿರುವ ತಮಗೆ ಭಗವಂತ ಆಯಸ್ಸು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪತ್ರ ಬರೆದು ಶುಭ ಹಾರೈಸಿದ್ದಾರೆ.

ಇನ್ನೂ BSY ಜತೆ ಏನೇ ವೈಷಮ್ಯ ಇರಬಹುದು, ಅವರು ನಮ್ಮ ನಾಯಕರು. ರಾಜ್ಯದಲ್ಲಿ ಪಕ್ಷ ಕಟ್ಟಿದ್ದು ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ್ , ಅದೇನೇ ಇರಲಿ ಬಿ.ಎಸ್​.ಯಡಿಯೂರಪ್ಪ ನನ್ನನ್ನು ಬೆಳೆಸಿದ್ರು ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದರು.

ಅಂದಹಾಗೆ ಇದು ನನ್ನ ಕೊನೆಯ ಅಧಿವೇಶನ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ, ಎಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ವಿದಾಯ ಭಾಷಣ ಮಾಡಿದ್ದರು.

Related Articles

- Advertisement -

Latest Articles