ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದೆ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಕೆಆರ್‌ಎಸ್ ಡ್ಯಾಂನಿಂದ ತನಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ನಿರ್ದೇಶನ ನೀಡಿದೆ. ಸಿಡಬ್ಲ್ಯೂಆರ್‌ಸಿ ನಿಗದಿಪಡಿಸಿದಷ್ಟು ನೀರನ್ನು ಕರ್ನಾಟಕ ಸರ್ಕಾರ ಹರಿಸುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಗಾಗಿ ಮುಖ್ಯ ನ್ಯಾಯಾಧೀಶರು ಪ್ರತ್ಯೇಕ ಪೀಠ ರಚಿಸಿದ್ದಾರೆ.
ಸುಪ್ರೀಂನಲ್ಲಿ ವಿಚಾರಣೆ ಬಾಕಿ ಇರುವಾಗಲೇ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ನೀರಿಗೆ ಬೇಡಿಕೆ ಇಟ್ಟಿರುವ ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರುವ ಬಿಡುವಂತೆ ರಾಜ್ಯ ಸರ್ಕಾರ ನಿರ್ದೇಶನ ಬಂದಿದೆ. ಮುಂದಿನ 15 ದಿನಗಳ ಕಾಲ, ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ ಬಂದಿದೆ. ನವದೆಹಲಿಯಲ್ಲಿ ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ರೀತಿಯ ಸೂಚನೆ ಬಂದಿದೆ.
ಇದನ್ನೂ ಓದಿ; ‘ಕುಮಾರಸ್ವಾಮಿ ದಾಖಲೆ ಇಲ್ಲದೆ ಮಾತಾಡಲ್ಲ; ಲಘುವಾಗಿ ಮಾತಾಡೋದು ಬೇಡ’
3 ಸಾವಿರ ಕ್ಯೂಸೆಕ್ ನಿಗದಿಪಡಿಸಿ ಎಂದು ಕರ್ನಾಟಕ ಸಮಿತಿ ಮುಂದೆ ಮನವಿ ಮಾಡಿತ್ತು. ಐದು ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂಬ ಸಿಡಬ್ಲ್ಯೂಆರ್‌ಸಿ ಆದೇಶವನ್ನು ಪ್ರಶ್ನಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಪ್ರಶ್ನೆ ಮಾಡಲು ನಿರ್ಧಾರ ಮಾಡಲಾಗಿದೆ.
ಮಂಗಳವಾರ ಮಧ್ಯಾಹ್ನ ಸಿಡಬ್ಲ್ಯೂಎಂಎ ಸಭೆ ದೆಹಲಿಯಲ್ಲಿ ನಡೆಯಲಿದೆ. ಕಾವೇರಿ ನೀರು ನಿರ್ವಹಣೆಯಲ್ಲಿ ಪರಮೋಚ್ಚ ಅಧಿಕಾರ ಪ್ರಾಧಿಕಾರಕ್ಕಿದೆ. ಅಲ್ಲಿ ಎಷ್ಟು ನೀರು ಬಿಡಬೇಕು ಎಂಬ ಬಗ್ಗೆ ಅಂತಿಮ ಆದೇಶವಾಗಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.