ಮೈಸೂರು: ಪ್ರೇಮಕುಮಾರಿ ಪ್ರಕರಣದಲ್ಲಿ ಮಾಜಿ ಸಚಿವ ಎಸ್.ಎ. ರಾಮದಾಸ್‌ಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ವಂಚನೆ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ, ರಾಮದಾಸ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ಮಾಡಾಳ್ ಲಂಚ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಕೋರಿದ್ದ ಅರ್ಜಿ ಇತ್ಯರ್ಥ
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯು ಕೊನೆಯ ಹಂತದಲ್ಲಿತ್ತು. ಈ ನಡುವೆ ತನಿಖೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ರಾಮ್‌ದಾಸ್‌ಗೆ ಹಿನ್ನಡೆಯಾಗಿದ್ದು, ವಿಶೇಷ ನ್ಯಾಯಾಲಯದ ವಿಚಾರಣೆಯ ಹಾದಿ ಸುಗಮವಾಗಿದೆ. ಸುಪ್ರಿಂಕೋರ್ಟ್ ಆದೇಶದ ಬೆನ್ನಲ್ಲೇ ಸಂತಸ ಹಂಚಿಕೊಂಡಿರುವ ಪ್ರೇಮಕುಮಾರಿ, ಒಬ್ಬ ಮಹಿಳೆಗೆ ಆಗಿರುವ ಅನ್ಯಾಯಕ್ಕೆ ಶಿಕ್ಷೆಯಾಗುವ ಕಾಲ ಸನ್ನಿಹಿತವಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯಲ್ಲಿ ರಾಮದಾಸ್‌ಗೆ ಶಿಕ್ಷೆಯಾಗಿ ನ್ಯಾಯ ಸಿಗುತ್ತದೆಂದು ವಿಶ್ವಾಸವಿದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.