ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಹಾಗೂ KSRTC: ಸಿದ್ದು ಸಂತಸ

ಬೆಂಗಳೂರು : ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಹಾಗೂ ಕೆಎಸ್ಆರ್‌ಟಿಸಿ ಸೇರ್ಪಡೆಯಾಗಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆಯಾಗಿತ್ತು.
ಇದೀಗ ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಹಾಗೂ ಕೆಎಸ್ಆರ್‌ಟಿಸಿ ಸೇರ್ಪಡೆಯಾಗಿವೆ.

ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ನಿಂದ ಪ್ರಮಾಣೀಕರಿಸಲ್ಪಟ್ಟ ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ವೇದಿಕೆಗೆ ಪ್ರವೇಶಿಸಿದೆ. ಇನ್ನು ಕೆಎಸ್‌ಆರ್‌ಟಿಸಿ ವಿಶ್ವದ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ. 1997 ರಿಂದ 464 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳು ದೊರೆತಿವೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನಮ್ಮ ಆಡಳಿತದ ದೃಷ್ಟಿಕೋನವು ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ ಮತ್ತು ವಿಶ್ವ ದರ್ಜೆಯ ಸಾರ್ವಜನಿಕ ಸೇವೆಯಲ್ಲಿ ಬೇರೂರಿದೆ. ಈ ಮನ್ನಣೆಗಳು ಸಮಗ್ರ ಮತ್ತು ಸಹಾನುಭೂತಿಯ ನೀತಿ ನಿರೂಪಣೆಯು ಏನನ್ನು ಸಾಧಿಸಬಹುದು ಎಂಬುದರ ಪ್ರತಿಬಿಂಬವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *