Saturday, June 10, 2023
spot_img
- Advertisement -spot_img

ನೀತಿ ಸಂಹಿತೆ ಉಲ್ಲಂಘನೆ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕೇಸ್

ನಿಪ್ಪಾಣಿ : ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಶಶಿಕಲಾ ಜೊಲ್ಲೆ ಆಪ್ತರಾಗಿದ್ದ ರಣರಾಗಿಣಿ ಎಂಬುವರು ಅರಿಶಿಣ-ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಿದ್ದರು.

ಮಹಿಳೆಯರಿಗೆ ಹಮ್ಮಿಕೊಂಡಿದ್ದ ಅರಿಶಿನ-ಕುಂಕುಮ ಈ ವೇಳೆ ಸಚಿವೆ ಶಶಿಕಲಾ ಜೊಲ್ಲೆ ಸಹ ಭಾಗವಹಿಸಿದ್ದರು. ಕಾರ್ಯಕ್ರಮದದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ.

ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಅವರ ಹಾಡು ಹಾಗೂ ಬಿಜೆಪಿ ಚಿಹ್ನೆಗಳನ್ನೂ ಪ್ರದರ್ಶಿಸಿದ್ದಾರೆ. ಈ ಕುರಿತು ನಿಪ್ಪಾಣಿ ಪುರಸಭೆ ಪೌರಾಯುಕ್ತ ಜಗದೀಶ ಬಾಬು ಹುಲಗೆಜ್ಜಿ ಅವರು ನಿಪ್ಪಾಣಿ ಶಹರ ಠಾಣೆಗೆ ದೂರು ಸಲ್ಲಿಸಿದ್ದರು. ಜೊತೆಗೆ ಭಾವಚಿತ್ರ ಇರುವ ಹಾಡು ಹಾಕಿ ಜನರಿಗೆ ಮನರಂಜನೆ ನೀಡಿದರು.

ಕಾರ್ಯಕ್ರಮ ಮುಗಿದ ನಂತರ ನೂರಾರು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದಾರೆ. ಮಹಿಳಾ ಮಂಡಳದ ಅಧ್ಯಕ್ಷೆ ರಣರಾಗಿಣಿ ಎ1 ಆರೋಪಿಯಾಗಿದ್ದು, ಶಶಿಕಲಾ ಜೊಲ್ಲೆ ಎ2 ಆರೋಪಿ ಎಂದು IPC ಸೆಕ್ಷನ್1860 ರ ಅಡಿ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

- Advertisement -spot_img

Latest Articles