ಚಿಕ್ಕೋಡಿ: ಕ್ಷೇತ್ರದಲ್ಲಿ ನೀವೇನೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇಲ್ಲಿ ಯಾಕೆ ಬಂದಿದ್ದೀರಿ ಎಂದು ಆರೋಪಿಸಿ ಸಚಿವೆ ಶಶಿಕಲಾ ಜೊಲ್ಲೆಗೆ ಗ್ರಾಮಕ್ಕೆ ಪ್ರವೇಶಿಸದಂತೆ ಸ್ಥಳೀಯರು ವಿರೋಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗಲಟಗಾಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಮೂಲಸೌಕರ್ಯಗಳನ್ನು ಸರ್ಕಾರ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿ ಸಚಿವರು ತಡೆದರು ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಚುನಾವಣಾ ಸಮಯದಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಮತ ಯಾಚನೆ ಮಾಡುತ್ತಿದ್ದಾರೆ.
ಬಿಜೆಪಿ ಸರ್ಕಾರ ನಿಮ್ಮ ಜೊತೆಗಿದೆ. ಕ್ಷೇತ್ರದ ಜನರ ಹಿತ ಕಾಪಾಡುವುದು ನಮ್ಮ ಕರ್ತವ್ಯ. ಹೀಗಾಗಿ ಯಾರೂ ಆತಂಕಕ್ಕೊಳಗಾಬೇಡಿ. ನಿಮ್ಮೆಲ್ಲರ ರಕ್ಷಣೆ ನಮ್ಮ ಕರ್ತವ್ಯ ಎಂದು ಹೇಳ್ತೀರಿ ,ನಮ್ಮಲ್ಲಿ ಯಾವುದೇ ಆಭಿವೃದ್ಧಿಯಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಈ ಹಿಂದೆ ಶಶಿಕಲಾ ಜೊಲ್ಲೆ ಮಹಿಳಾ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು.