Friday, September 29, 2023
spot_img
- Advertisement -spot_img

ಇಬ್ಬರು ಅಸಹಾಯಕರು ಒಂದಾಗ್ತಿದ್ದಾರೆ : ಬಿಜೆಪಿ-ಜೆಡಿಎಸ್ ಮೈತ್ರಿಗೆ ಶೆಟ್ಟರ್ ವ್ಯಂಗ್ಯ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಸುದ್ದಿ ಹಬ್ಬಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇಬ್ಬರು ಅಸಹಾಯಕರು ಒಂದಾಗ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ವಿಚಾರ ಅವರಿಗೆ ಬಿಟ್ಟಿದ್ದು. ಈ ಹಿಂದೆಯೂ ಅವರು ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಪಕ್ಷಗಳು ಪರಸ್ಪರ ಫೈಟ್ ಮಾಡಿದ್ದವು. ಈಗ ಮತ್ತೆ ಮೈತ್ರಿ ವಿಚಾರ ಮಾತನಾಡುತ್ತಿದ್ದಾರೆ. ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನಾನುಕೂಲವಾದಾಗ ದೂರ ಆಗುವುದರಿಂದ ಅವರು ಜನರ ನಂಬಿಕೆ ಕಳೆದುಕೊಳ್ತಿದ್ದಾರೆ ಎಂದರು.

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ ಅಂತ ಬಿಜೆಪಿಯವರು ಆರೋಪ ಮಾಡಿದ್ದರು. ಒಂದೇ ತಿಂಗಳಲ್ಲಿ ಅವರನ್ನು ತಮ್ಮ ಮೈತ್ರಿ ಸರ್ಕಾರಕ್ಕೆ ಸೇರಿಸಿಕೊಂಡರು. ರಾಜಕೀಯ ಪಕ್ಷಕ್ಕೆ ಗಟ್ಟಿ ನಿರ್ಧಾರಗಳು ಇರಬೇಕು. ಇವತ್ತು ಟೀಕೆ ಮಾಡೋದು, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಏನರ್ಥವಿದೆ. ಬಿಜೆಪಿಯವರು ಅವರ ಜೊತೆ ಬಂದ ಪಕ್ಷಗಳನ್ನು ಸರಿಯಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ : ‘ಬಿಜೆಪಿ-ಜೆಡಿಎಸ್ ಮೈತ್ರಿಗೆ ನಮ್ಮ ವಿರೋಧವಿಲ್ಲ; ಐ ವಿಶ್ ದೆಮ್ ಆಲ್ ದಿ ಬೆಸ್ಟ್’

ಉಡುಪಿ ಜಿಲ್ಲೆ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ದಿನದಿಂದ ದಿನಕ್ಕೆ ಮೇಲೇರುತ್ತಿದೆ. ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ನತ್ತ ಮುಖ ಮಾಡ್ತಿದ್ದಾರೆ. ಇದರಿಂದ ಬಿಜೆಪಿಗೆ ಹೆದರಿಕೆ ಶುರುವಾಗಿದೆ. ಲೋಕಸಭಾ ಚುನಾವಣೆ ವೇಳೆಗೆ ದೊಡ್ಡ ಮಟ್ಟದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ. ಮುಂದಿನ ದಿನಗಳಲ್ಲಿ ಪಕ್ಷಾಂತರ ಮತ್ತಷ್ಟು ಹೆಚ್ಚಾಗಲಿದೆ. ಇಡೀ ದೇಶದಲ್ಲಿ ಬಿಜೆಪಿಗೆ ಇದೇ ಸ್ಥಿತಿ ಬರಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ 2ನೇ ಸ್ಥಾನದಲ್ಲಿದ್ದು, ಚುನಾವಣೆ ವೇಳೆಗೆ ನಂಬರ್ 1ನೇ ಸ್ಥಾನಕ್ಕೆ ಬಂದರೂ ಅಚ್ಚರಿಯಿಲ್ಲ ಎಂದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles