ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಸೋಲು, ಗೆಲುವು ಸಹಜವಾಗಿದೆ. ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಸರ್ಕಾರ ರಚಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದು, ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿ ಕಣ್ಣೀರು ಹಾಕಿ ಅತ್ತರು.ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ, ಸಚಿವ ಆರ್ ಅಶೋಕ್ ವಿರುದ್ಧ ಡಿಕೆ ಶಿವಕುಮಾರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕನಕಪುರದಲ್ಲಿ ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್ಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಆರ್.ಅಶೋಕ್ ಹೀನಾಯ ಸೋಲುಂಡಿದ್ದಾರೆ.