Saturday, June 10, 2023
spot_img
- Advertisement -spot_img

ಕಾಂಗ್ರೆಸ್‌ನ ಸುಳ್ಳು ಭರವಸೆ ನಂಬಲು ಕರ್ನಾಟಕದ ಜನರು ಮೂರ್ಖರಲ್ಲ

ಬೆಂಗಳೂರು: ಕಾಂಗ್ರೆಸ್‌ನ ಸುಳ್ಳು ಭರವಸೆ ನಂಬಲು ಕರ್ನಾಟಕದ ಜನರು ಮೂರ್ಖರಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ಉಚಿತ ವಿದ್ಯುತ್, ಯುವಕರಿಗೆ 3000 -1500 ರೂಪಾಯಿಯನ್ನು ಯಾವ ಹಣದಿಂದ ಕೊಡುತ್ತೀರಿ? ಕರ್ನಾಟಕದ ಜನರು ವಿದ್ಯಾವಂತರು, ಪ್ರಜ್ಞಾವಂತರು, ಬುದ್ಧಿವಂತರು. ಅವರೆಲ್ಲರೂ ಮಾಧ್ಯಮ ನೋಡುತ್ತಾರೆ, ಸೋಷಿಯಲ್ ಮೀಡಿಯ ಗಮನಿಸುತ್ತಾರೆ, ಕಾಂಗ್ರೆಸ್‍ನವರು ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಅಂತಾ ಅವರಿಗೇನೂ ಗೊತ್ತಾಗಲ್ವಾ ? ಯಾವ ರಾಜ್ಯದಲ್ಲಿ ನೀವು ಮೋಸ ಮಾಡಿದ್ದೀರೆಂಬ ಅರಿವು ಅವರಿಗೆ ಇದೆ ಎಂದು ತಿಳಿಸಿದರು.

2001ರ ಗ್ಯಾರಂಟಿ ಕಾರ್ಡ್, 2013ರ ಗ್ಯಾರಂಟಿ ಕಾರ್ಡ್ ಏನಾಗಿದೆ ಎಂದು ಕಾಂಗ್ರೆಸ್‍ನ್ನು ಜನತೆ ಪ್ರಶ್ನಿಸಬೇಕು ಎಂದು ಮನವಿ ಮಾಡಿದರು. ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿ ಮಾತ್ರ ಯೋಜನೆ ಕೊಟ್ಟಿದ್ದೀರಲ್ಲವೇ ಎಂದು ಪ್ರಶ್ನಿಸಿದರು.ಜನರಿಗೆ ಸುಳ್ಳು ಹೇಳುತ್ತಿದ್ದಾರೆ.

2000- 2001ರಲ್ಲಿ ನಿರುದ್ಯೋಗಿ ಯುವಕರಿಗೆ 5 ಸಾವಿರ ಕೊಡುವುದಾಗಿ ಕಾಂಗ್ರೆಸ್ ಭರವಸೆ ಕೊಡಲಾಗಿತ್ತು. ಅದಕ್ಕಾಗಿ ನಾವು ಹೋರಾಟವನ್ನೂ ಮಾಡಿದ್ದೆವು. ಆದರೆ, ಅದು ಈಡೇರಲಿಲ್ಲ ಎಂದು ಟೀಕಿಸಿದರು. ಸುಳ್ಳು ಹೇಳುವುದಕ್ಕೂ, ಮೋಸ ಮಾಡುವುದಕ್ಕೂ ಒಂದು ಮಿತಿ ಇರಲಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

Related Articles

- Advertisement -spot_img

Latest Articles