ಬಾಗಲಕೋಟೆ: ನಾನು ಕೂಡ ಬಾದಾಮಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಈಗಾಗಲೇ ಬಾದಾಮಿ ಕ್ಷೇತ್ರಕ್ಕೆ ನಾಲ್ವರು ಆಕಾಂಕ್ಷಿಗಳು ಇದ್ದಾರೆ ನಾವೆಲ್ಲ ಸೇರಿ ಕಾಂಗ್ರೆಸ್ ಪಕ್ಷವನ್ನು ಸದೆಬಡಿಯುತ್ತೇವೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದರು.
ಎಸ್ಟಿ ಸಮಾವೇಶದಲ್ಲಿ ಮಾತನಾಡಿ, ಐವರು ಪಂಚಪಾಂಡವರ ರೀತಿ ಅಣ್ಣತಮ್ಮಂದಿರಂತೆ ಇದ್ದೇವೆ, ಮುಂದಿನ ಬಾರಿ ಅಧಿಕಾರಕ್ಕೆ ಬಿಜೆಪಿ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪ ಮುಖ್ಯಮಂತ್ರಿ ಪಾಳಯ ಹೋಗಿದೆ, ಈಗ ಪ್ರಮೋಷನ್, ಈಗ ಮುಖ್ಯಮಂತ್ರಿ ಪಾಳಯ, ಪಾರ್ಟಿ ಅವಕಾಶ ಮಾಡಿಕೊಟ್ಟರೇ ಸಿಎಂ ಆಗುತ್ತೇನೆ ಎನ್ನುವ ಮೂಲಕ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಶ್ರೀರಾಮುಲು, ಮತ್ತೊಮ್ಮೆ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು, ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸ್ಪರ್ಧಿಸಿ, ಕೇವಲ 1863 ಮತಗಳಿಂದ ಪರಾಭವಗೊಂಡಿದ್ದರು. ಇದೀಗ ಮತ್ತೆ ಬಾದಾಮಿ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಶ್ರೀರಾಮುಲು ಹೇಳಿದ್ದಾರೆ.