ಬೆಂಗಳೂರು: ಇದೇ ಜನವರಿ 3ರಿಂದ ಸಿದ್ದರಾಮಮಯ್ಯನವರ ಬಸ್ ಯಾತ್ರೆ ಆರಂಭವಾಗಲಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಸವಕಲ್ಯಾಣದ ಅನುಭವ ಮಂಟಪದಿಂದಲೇ ಬಸ್ ಯಾತ್ರೆ ಆರಂಭಿಸಲಿದ್ದಾರೆ.
ಸಿದ್ದು ಬಸ್ ಯಾತ್ರೆ, ಉತ್ತರ ಕರ್ನಾಟಕದ ಪ್ರಮುಖ10ರಿಂದ 12 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಈ ಹಿಂದೆ ಲಿಂಗಾಯತ ಧರ್ಮ ವಿಭಜಕ ಎಂಬ ಹಣೆ ಪಟ್ಟಿ ಹೋಗಲಾಡಿಸಲು ಬಸವಕಲ್ಯಾಣದ ಅನುಭವ ಮಂಟಪದಿಂದಲೇ ಆರಂಭಿಸಲಿದ್ದಾರೆ. ಇದಕ್ಕೆ ಈಗಾಗಲೇ ಹೈಟೆಕ್ ಬಸ್ ಸಿದ್ಧವಾಗಿದೆ.
ಸಿದ್ದರಾಮಯ್ಯ ಉತ್ತರ ಕರ್ನಾಟಕದಿಂದ ಪ್ರಾರಂಭ ಮಾಡಿದರೆ ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಿಂದ ಬಸ್ ಯಾತ್ರೆ ಮಾಡುವ ಸಾಧ್ಯತೆ ಇದ್ದು, ಇದಕ್ಕೆ ಈಗಾಗಲೇ ಹೈಟೆಕ್ ಬಸ್ ಸಹ ರೆಡಿಯಾಗಿದೆ. ಆದ್ರೆ, ಸದ್ಯ ವಿದೇಶ ಪ್ರವಾಸದಲ್ಲಿ ಡಿಕೆ ಶಿವಕುಮಾರ್ ಕೂಡ ಜನವರಿಯಲ್ಲಿ ತಮ್ಮ ಬಸ್ ಯಾತ್ರೆ ಶುರುಮಾಡುವ ಸಾಧ್ಯತೆಗಳಿವೆ.
ಕರ್ನಾಟಕದಲ್ಲಿ 2023ರ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಡಿ. ಕೆ. ಶಿವಕುಮಾರ್ ಪ್ರತ್ಯೇಕವಾಗಿ ಯಾತ್ರೆ ನಡೆಸಲು ಯೋಜಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಸ್ಪಷ್ಟ ಸಂದೇಶ ನೀಡಿದ್ದು, ಪ್ರತ್ಯೇಕ ಪ್ರವಾಸ ಬೇಡ, ಒಟ್ಟಾಗಿ ಪ್ರಚಾರ ಮಾಡಿ ಎಂದು ತಿಳಿಸಿತ್ತು.
ಬಸ್ ಯಾತ್ರೆ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ಪಕ್ಷದ ನಾಯಕತ್ವದಿಂದ ಎಲ್ಲ ವಿವರಗಳನ್ನು ರೂಪಿಸಲಾಗುವುದು. ಬಸ್ ಯಾತ್ರೆಗೂ ಮುನ್ನ ಪಕ್ಷವು ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದ್ದು, ಸ್ಥಳೀಯ ಮುಖಂಡರ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನೂ ಬಗೆಹರಿಸಲಾಗುತ್ತಿದೆ. ಈಗಾಗಲೇ ಅರ್ಧ ಜಿಲ್ಲೆಗಳಲ್ಲಿ ಸಭೆಗಳು ಪೂರ್ಣಗೊಂಡಿದ್ದು, ಉಳಿದ ಜಿಲ್ಲೆಗಳಲ್ಲಿ ಸಭೆ ಮುಗಿದ ನಂತರ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.