ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತುರ್ತು ಸಭೆ ಕರೆದಿದ್ದರು. ವಿಧಾನಸೌಧದಲ್ಲಿ ಮಧ್ಯಾಹ್ನ 12.30 ಕ್ಕೆ ಸಭೆ ನಡೆದಿದೆ.
ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿರುವ ಸಂಬಂಧ ಚರ್ಚೆ ನಡೆಯಿತು.
ಸಭೆಯಲ್ಲಿ ಉಪ ಡಿಸಿಎಂ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಪತ್ರ ಬರೆಯಲಾಗಿದ್ದು, ಪ್ರಧಾನಮಂತ್ರಿಗಳ ಕಚೇರಿಯ ಪ್ರತಿಕ್ರಿಯೆಗೆ ಕಾಯ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು.
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಸೂಚನೆ ನೀಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.