ದಕ್ಷಿಣ ಕನ್ನಡ : ರಾಜ್ಯದ ಸಿದ್ದರಾಮಯ್ಯ ಸರ್ಕಾರ ಭ್ರಷ್ಟರ ಕೂಟದ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ, ಸರ್ಕಾರದ ವಿರುದ್ಧ ಬರೆದ ಮಾಧ್ಯಮಗಳು, ಸಾಮಾಜಿಕ ಜಾಲತಾಣದ ಮೇಲೂ ದಬ್ಬಾಳಿಕೆ ನಡೆಯುತ್ತಿದೆ, ಪರಿಶಿಷ್ಟ ಜಾತಿ, ಪಂಗಡದವರ ಜಾಗ ಕಬಳಿಸಿದ ಸಚಿವ ಸುಧಾಕರ್ ರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ, ಮುಖ್ಯಮಂತ್ರಿಗಳಿಗೆ ಮಾನವಿದ್ದರೆ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ನಮ್ಮ ಸರ್ಕಾರವಿರುವ ಸಚಿವರ ವಿರುದ್ಧ ದೂರು ಬಂದಾಗ ರಾಜೀನಾಮೆ ಕೊಡಿಸಿದ್ದೆವು, ಆದರೆ ಈಗಿನ ಸರ್ಕಾರದ ಎಲ್ಲ ಮಂತ್ರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ, ಚೆಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳೇ ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ, ಕೇವಲ ಮೂರು ತಿಂಗಳಲ್ಲಿ 275 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೆ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶಿಸಿದರು.
ಇದನ್ನೂ ಓದಿ: Parliament’s Special Session Agenda : ಸಂಸತ್ ವಿಶೇಷ ಅಧಿವೇಶನದ ಕಾರ್ಯಸೂಚಿ ಬಿಡುಗಡೆ ಮಾಡಿದ ಸರ್ಕಾರ
ಬರಗಾಲ ಘೋಷಣೆ ಮಾಡಲೂ ಮೀನಾಮೇಷ ಎಣಿಸುತ್ತಿದೆ, ಕೇವಲ 164 ತಾಲೂಕಿನಲ್ಲಿ ಬರ ಘೋಷಣೆ ಮಾಡಿದೆ, ಇಡೀ ರಾಜ್ಯದಲ್ಲಿ ಬರದ ಸ್ಥಿತಿ ಇದೆ, ಆದ ಕಾರಣ ಇಡೀ ರಾಜ್ಯದಲ್ಲಿ ಬರ ಘೋಷಣೆ ಮಾಡಬೇಕು, ಮಲೆನಾಡು ಕರಾವಳಿ ಭಾರೀ ಮಳೆಯಾಗುವ ಪ್ರದೇಶಗಳು ಆದರೆ ಈ ಬಾರಿ ಈ ಭಾಗದಲ್ಲೂ ಮಳೆಯಿಲ್ಲ, ನದಿಗಳೆಲ್ಲಾ ಬತ್ತಿ ಹೋಗುತ್ತಿದೆ, ಇಡೀ ರಾಜ್ಯಕ್ಕೆ ಬರ ಘೋಷಣೆ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ ಎಂದು ಮನವಿ ಮಾಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.