ಹೈದರಾಬಾದ್: ಕಾಂಗ್ರೆಸ್ ಪಕ್ಷವು ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಇಂದಿನಿಂದ ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿಯಾಗಿದ್ದಾರೆ.
ಸಿದ್ದರಾಮಯ್ಯ ಅವರು ಇಂದು ಹೈದರಾಬಾದ್‌ನಲ್ಲೇ ಅವರು ವಾಸ್ತವ್ಯ ಹೊಡಲಿದ್ದು, ನಾಳೆ ಅಲ್ಲಿಂದ ನೇರವಾಗಿ ಕಲಬುರಗಿಗೆ ಬರಲಿದ್ದಾರೆ.


ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು ಭಾಗವಹಿಸಿದ್ದಾರೆ.


ಮುಂಬರುವ ಐದು ರಾಜ್ಯಗಳ ಚುನಾವಣೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಅದಕ್ಕೆ ಅನುಗುಣವಾಗಿ ಯೋಜನೆ ಹಮ್ಮಿಕೊಳ್ಳಲಾಗುತ್ತದೆ.


ನಮ್ಮ ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರೊಂದಿಗೆ ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು’ ಎಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.


ಇದನ್ನೂ ಓದಿ: ಇಂದಿನಿಂದ ಸಿಡಬ್ಲ್ಯೂಸಿ ಸಭೆ: ಹೈದರಾಬಾದ್‌ಗೆ ತೆರಳಿದ ಸಿಎಂ ಸಿದ್ದರಾಮಯ್ಯ
ಸಿಡಬ್ಲ್ಯೂಸಿ ಸಭೆಯಲ್ಲಿ 39 ಸಾಮಾನ್ಯ ಸದಸ್ಯರು, 32 ಖಾಯಂ ಆಹ್ವಾನಿತರು ಮತ್ತು 13 ವಿಶೇಷ ಆಹ್ವಾನಿತರನ್ನು ಹೊಂದಿದೆ.


ಇವರಲ್ಲಿ 15 ಮಹಿಳೆಯರು ಮತ್ತು ಹಲವಾರು ಹೊಸ ಮುಖಗಳಾದ ಶಶಿ ತರೂರ್, ಸಚಿನ್ ಪೈಲಟ್ ಮತ್ತು ಗೌರವ್ ಗೊಗೋಯ್ ಸಾಮಾನ್ಯ ಸದಸ್ಯರಾಗಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.