ಬೆಂಗಳೂರು : ಲಕ್ಕಿ ಮನೆ ಅಂತಾನೆ ಜನ ಜನಿತವಾಗಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಗೆ ಸಿಎಂ ಸಿದ್ದರಾಮಯ್ಯ ಇಂದು ಶಿಫ್ಟ್ ಆಗಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ವಾಸವಿದ್ದ ಕಾವೇರಿ ನಿವಾಸದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆ, ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ.
ಶಿವಾನಂದ ವೃತ್ತದ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ ಸಿದ್ದರಾಮಯ್ಯ ವಾಸ ಬದಲಿರುವ ಹಿನ್ನೆಲೆ, ಕಾವೇರಿ ನಿವಾಸದಲ್ಲಿ ಇಂದು ಬೆಳಗ್ಗೆ ಸಿಎಂ ಕುಟುಂಬದ ಸದಸ್ಯರಿಂದ ಪೂಜೆ ನಡೆದಿದೆ. ಸಿಎಂ ಪತ್ನಿ ಪಾರ್ವತಿ ಪೂಜೆ ಸಲ್ಲಿಸಿದ್ದು, ಸಿದ್ದರಾಮಯ್ಯ ಅವರು ಪೂಜೆಯಲ್ಲಿ ಭಾಗಿಯಾಗಿದರು.
ಈ ಹಿಂದೆಯೂ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಾವೇರಿ ನಿವಾಸದಲ್ಲೇ ವಾಸವಿದ್ದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಕಾವೇರಿ ನಿವಾಸದಲ್ಲೇ ಇದ್ದರು. ಸಮ್ಮಿಶ್ರ ಸರ್ಕಾರ ಕುಸಿದಾಗ ಯಡಿಯೂರಪ್ಪ ಸಿಎಂ ಆದರು. ಆ ಸಂದರ್ಭದಲ್ಲಿ ಕಾವೇರಿ ನಿವಾಸದಲ್ಲಿದ್ದ ಸಿದ್ದರಾಮಯ್ಯ, ನೂತನ ಸಿಎಂ ಯಡಿಯೂರಪ್ಪ ಅವರಿಗೆ ಮನೆ ಬಿಟ್ಟು ಕೊಡಲು ವಿಳಂಬ ಮಾಡಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು.
ನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.