Monday, March 27, 2023
spot_img
- Advertisement -spot_img

ಬಿಜೆಪಿ ಹುಟ್ಟಿಕೊಂಡ ದಿನದಿಂದ ಬಡಜನರಿಗೆ ಸಾವಿನ ಭಾಗ್ಯ, ಭ್ರಷ್ಟರಿಗೆ ಸಂಪತ್ತಿನ ಭಾಗ್ಯ ಒದಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಕಮಲದ ಅನೈತಿಕ ಕೂಸು ರಾಜ್ಯ ಬಿಜೆಪಿ ಸರ್ಕಾರ ಹುಟ್ಟಿಕೊಂಡ ದಿನದಿಂದ ಬಡಜನರಿಗೆ ಸಾವಿನ ಭಾಗ್ಯ, ಭ್ರಷ್ಟರಿಗೆ ಸಂಪತ್ತಿನ ಭಾಗ್ಯ ಬಂದು, ವಿಧಾನಸೌಧವೇ ಕಮಿಷನ್ ಅಡ್ಡೆಯಾಗಿ ಬದಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಹುದ್ದೆಯನ್ನೇ 2000 ಕೋಟಿ ರೂಪಾಯಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ‌ ಮಾಡುತ್ತಿರುವುದು ತಮಾಷೆಯಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಶೇ 40ರಷ್ಟು ಕಮಿಷನ್ನಲ್ಲಿ ನಿಮ್ಮ‌ ಪಾಲೆಷ್ಟು ಮಿಸ್ಟರ್ ಅಮಿತ್ ಶಾ? ಎಂದು ಪ್ರಶ್ನಿಸಿದ್ದಾರೆ.

ನೇಮಕಾತಿ, ವರ್ಗಾವಣೆ, ಬಡ್ತಿ, ಅನುದಾನ ಹಂಚಿಕೆ, ಸೇರಿ ಶೇ 40ರಷ್ಟು ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ನಾಯಕರನ್ನು ಪಕ್ಕದಲ್ಲಿಟ್ಟುಕೊಂಡು ಭ್ರಷ್ಟಾಚಾರದ ಬಗೆಗೆ ಮಾತನಾಡುವ ಅಮಿತ್ ಶಾ ಅವರ ಭಂಡತನಕ್ಕೆ ಶಹಭಾಸ್ ಅನ್ನಲೇಬೇಕು. ನಿರಪರಾಧಿ ಜನ ಆಮ್ಲಜನಕ, ಬೆಡ್, ವೆಂಟಿಲೇಟರ್ ಸಿಗದೆ ಹಾದಿಬೀದಿಯಲ್ಲಿ ಪ್ರಾಣ ಬಿಟ್ಟರು. ನೀವು ತಟ್ಟೆ ಬಾರಿಸಲು ಹೇಳಿ ಜನರನ್ನು ಮಂಗ ಮಾಡಿದಿರಿ. ಇದನ್ನು ರಾಜ್ಯದ ಜನ ಮರೆತಿಲ್ಲ ಮಿಸ್ಟರ್ ಅಮಿತ್ ಶಾ ಎಂದು ಕೇಳಿದ್ದಾರೆ.

Related Articles

- Advertisement -

Latest Articles