ಬೆಂಗಳೂರು: ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ, ನನಗೂ ಘೋಷಣೆ ಮಾಡುವ ಹಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕೊಪ್ಪಳದ ಮದುವೆ ಸಮಾರಂಭದ ವೇದಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು ಇದಕ್ಕೆ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಎನ್‌ಕರೇಜ್ ಮಾಡಿ ಹೇಳಿರಬಹುದು. ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಖರ್ಗೆ ಅವರೇ ನಮಗೆ ಹೈಕಮಾಂಡ್, ಅವರಿಗೆ ಘೋಷಣೆ ಮಾಡುವ ಹಕ್ಕಿದೆ. ನನಗೂ ಕೂಡ ಆ ಹಕ್ಕಿಲ್ಲ ಎಂದು ಒತ್ತಿ ಹೇಳಿದ್ದಾರೆ.
ವೋಟರ್ ಐಡಿ ಹಗರಣದ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ನಾವು ನಾಳೆಗೆ ಸಮಯ ಕೇಳಿದ್ದೇವೆ. ನಮಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರೇ ಬೇಕು. ನಮ್ಮ ಹತ್ರ ಅನೇಕ ಮಾಹಿತಿಗಳಿವೆ. ಪೊಲೀಸ್ ಅಧಿಕಾರಿಗಳು ಏನು ಮಾಡ್ತಿದ್ದಾರೆ ಅನ್ನೋದನ್ನ ಗಮನಿಸುತ್ತಿದ್ದೇವೆ.
ನಮ್ಮ ಕಡೆ ಏನೇನು ಎಂಒಯು ಗಳಿವೆ, ಡಿಟೈಲ್ ತನಿಖೆ ಮಾಡಿದ್ದೇವೆ. ಯಾರು ಕಿಂಗ್ ಪಿನ್? ಯಾರು ಮಂತ್ರಿಗಳು ಇದ್ದಾರೆ? ಶಾಸಕರು ಇದ್ದಾರೆ ಅದು ಬಯಲಾಗಬೇಕು ಎಂದು ಒತ್ತಾಯಿಸಿದ್ದಾರೆ.