ಕೋಲಾರ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ವರ್ಧಿಸುತ್ತಾರೆ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಕೋಲಾರದ ಜನತೆ ತೋರುತ್ತಿರುವ ಅಭಿಮಾನದಿಂದಾಗಿ ಇಲ್ಲಿಂದಲೇ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಕೋಲಾರ ಕಾಂಗ್ರೆಸ್ ನ ಭದ್ರಕೋಟೆ. ಇಲ್ಲಿಂದಲೇ ನಮ್ಮ ತಂದೆ ಸ್ಪರ್ಧೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಕ್ಷೇತ್ರ ಹುಡುಕಾಟದಲ್ಲಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊನೆಗೂ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಸ್ವತಃ ಸಿದ್ದರಾಮಯ್ಯ ಕೋಲಾರದಲ್ಲಿ ಅಖಾಡಕ್ಕಿಳಿಯುವ ಘೋಷಣೆಯನ್ನು ಮಾಡಿದ್ದಾರೆ.
ವರುಣದಿಂದ ಸ್ಪರ್ಧಿಸುವಂತೆ ನಾನು ನಮ್ಮ ತಂದೆಗೆ ಆಹ್ವಾನ ನೀಡಿದ್ದೆ. ಆದರೆ, ಅವರು ಕೋಲಾರದಿಂದ ಸ್ಪರ್ಧೆಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ಬಾದಾಮಿ ಕ್ಷೇತ್ರದ ಜನ ಸಹ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದರಾಮಯ್ಯರನ್ನು ಆಹ್ವಾನಿಸುತ್ತಿದ್ದಾರೆ.