Thursday, June 8, 2023
spot_img
- Advertisement -spot_img

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಳೆ ಅಡ್ಡಿ?

ಬೆಂಗಳೂರು: ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಳೆಯ ಅಡ್ಡಿಯಾಗಲಿದೆ ಎಂಬ ಆತಂಕ ಶುರುವಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಗಣ್ಯರು ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 20 ಮತ್ತು 21 ರಂದು ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಇಲಾಖೆ ತಿಳಿಸಿತ್ತು. ಅಂದಹಾಗೆ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಅಂತಿಮ ಹಂತದ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಜನರಿಗೆ ಪ್ರಮಾಣ ವಚನ ಕಾರ್ಯಕ್ರಮ ವೀಕ್ಷಣೆಗೆ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿದೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಅದೇ ಸ್ಥಳದಲ್ಲಿ ಬೃಹತ್‌ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

Related Articles

- Advertisement -spot_img

Latest Articles