ಬೆಂಗಳೂರು: ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆಶಿವಕುಮಾರ್‌ಗೆ ಸಚಿವರಿಗೆ ರಾಜಕೀಯ ಗಣ್ಯರು ಶುಭ ಕೋರಿದ್ದಾರೆ.
“ಕಾನೂನಿನ ಮೂಲಕ ಸ್ಥಾಪಿತವಾದ ಭಾರತೀಯ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಹಿಡಿಯುತ್ತೇನೆಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನಿರ್ವಹಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ ಎಲ್ಲ ಬಗೆಯ ಜನರಿಗೆ, ಸಂವಿಧಾನಕ್ಕೆ ಮತ್ತು ಕಾನೂನಿಗೆ ಅನುಸಾರವಾಗಿ ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿದರು.